ಬೈಕಂಪಾಡಿ : ಅರೋಮಾಝೆನ್ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಬೆಂಕಿ ಆಕಸ್ಮಿಕ; ಅಪಾರ ನಷ್ಟ
ಪಣಂಬೂರು: ಇಲ್ಲಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿದ್ದ ಅರೋಮಾಝೆನ್ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಗೆ ಬುಧವಾರ ಬೆಳಗ್ಗೆ 5ರ ಸುಮಾರಿಗೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದೆ.
ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಎಂಸಿಎಫ್, ಎನ್ಎಂ ಪಿಎ, ಮತ್ತು ಕದ್ರಿಯ ಅಗ್ನಿ ಶಾಮಕ ದಳ ವಾಹನಗಳು ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿವೆ. ಘಟನೆಗೆ ಸಂಬಂಧಿಸಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಅವಘಡಕ್ಕೆ ಕಾರಣಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.