ಬೊಲೆರೋ ಪಿಕ್ ಅಪ್ ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟ; ಶಿರ್ವ ಪೊಲೀಸರಿಂದ ರಕ್ಷಣೆ

Spread the love

ಬೊಲೆರೋ ಪಿಕ್ ಅಪ್ ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟ; ಶಿರ್ವ ಪೊಲೀಸರಿಂದ ರಕ್ಷಣೆ

ಉಡುಪಿ: ಬೊಲೆರೋ ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ವೇಳೆ ಶಿರ್ವ ಪೊಲೀಸರು ತಡೆದು 3 ಜಾನುವಾರುಗಳನ್ನು ಶನಿವಾರ ರಾತ್ರಿ ರಕ್ಷಣೆ ಮಾಡಿದ್ದಾರೆ.

ಶನಿವಾರ ರಾತ್ರಿ ಶಿರ್ವ ಠಾಣಾಧಿಕಾರಿ ಶ್ರೀ ಶೈಲ್ ಡಿಎಮ್ ತನ್ನ ಸಿಬಂದಿಯೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಕಳತ್ತೂರ ಗ್ರಾಮದ ಜನತಾ ಕಾಲನಿ ಬಳಿ ಬೊಲೆರೋ ಪಿಕ್ ಅಪ್ ವಾಹನದಲ್ಲಿ ಹಸುಗಳನ್ನು ಕಳವು ಮಾಡಿ ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ತೆರಳಿ ವಾಹನ ಹಿಂಬಾಲಿಸಿಕೊಂಡ ಹೋದ ವೇಳೆ ವಾಹನದಲ್ಲಿದ್ದ ಮೂರು ಮಂದಿ ತಪ್ಪಿಸಿಕೊಂಡು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ತಪ್ಪಿಸಿಕೊಂಡು ಹೋದ ಆರೋಪಿಗಳನ್ನು ಮೊಯ್ದಿನ್, ಕಬೀರ್ ಮತ್ತು ಸಿದ್ದೀಕ್ ಎಂದು ಗುರುತಿಸಲಾಗಿದೆ.

ವಾಹನದಲ್ಲಿ 3 ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡು ಬಂದಿದ್ದು ಅವುಗಳನ್ನು ಪೊಲೀಸರು ರಕ್ಷಿಸಿದ್ದು, ಬೊಲೇರೊ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love