Home Mangalorean News Kannada News ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಿದ ಪೊಲೀಸರಿಗೆ ದಕ ಯುವ ಜೆಡಿಎಸ್ ಅಭಿನಂದನೆ

ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಿದ ಪೊಲೀಸರಿಗೆ ದಕ ಯುವ ಜೆಡಿಎಸ್ ಅಭಿನಂದನೆ

Spread the love

ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಿದ ಪೊಲೀಸರಿಗೆ ದಕ ಯುವ ಜೆಡಿಎಸ್ ಅಭಿನಂದನೆ

ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ದರೋಡೆ ಪ್ರಕರಣವನ್ನು ಕ್ಷಿಪ್ರವಾಗಿ ಭೇದಿಸಿ ಆರೋಪಿಗಳನ್ನು ಬಂಧಿಸಿದ ನಗರ ಪೊಲೀಸರ ಕಾರ್ಯವೈಖರಿಯನ್ನು ಪ್ರಶಂಸಿ ದಕ ಜಿಲ್ಲಾ ಯುವ ಜೆಡಿಎಸ್ ವತಿಯಿಂದ ನಗರ ಪೊಲೀಸ್ ಆಯುಕ್ತರಿಗೆ ಜಿಲ್ಲಾಧ್ಯಕ್ಷರಾದ ಅಕ್ಷಿತ್ ಸುವರ್ಣ ಅವರು ಅಭಿನಂದಿಸಿದರು.

ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಅಕ್ಷಿತ್ ಸುವರ್ಣ ಅವರು ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ದರೋಡೆ ಪ್ರಕರಣವನ್ನು ಕೇವಲ ಮೂರು ದಿನದ ಅವಧಿಯಲ್ಲಿ ತನ್ನ ಪೊಲೀಸ್ ಸಿಬಂದಿಗಳ ಕಾರ್ಯಾಚರಣೆಯಲ್ಲಿ ಭೇಧಿಸಿದ್ದಲ್ಲದೆ ಮೂವರು ಆರೋಪಿಗಳನ್ನು ಬಂಧಿಸಿ ಕದ್ದ ಸೊತ್ತುಗಳನ್ನು ವಶಪಡಿಸಿಕೊಂಡಿರುವುದು ಶ್ಲಾಘನಾರ್ಹ ಸಂಗತಿಯಾಗಿದೆ. ಪೋಲಿಸರ ಕ್ಷಿಪ್ರ ಕಾರ್ಯಾಚರಣೆ ಸರ್ವತ್ರ ಮೆಚ್ಚುಗೆಗೆ ಪಾತ್ರವಾಗಿದ್ದು ಪೊಲೀಸರ ಮೇಲಿರುವ ಅಭಿಮಾನವನ್ನು ಇನ್ನಷ್ಟು ಹೆಚ್ಚಿಸುವಂತೆ ಮಾಡಿದೆ.

ದರೋಡೆ ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸಿದ ಪೊಲೀಸ್ ಇಲಾಖೆಯೊಂದಿಗೆ ನಾಗರಿಕ ಸಮಾಜ ಸದಾ ಬೆನ್ನೆಲೆಬುಬಾಗಿ ನಿಲ್ಲಿಲಿದೆ. ನಗರದಲ್ಲಿ ಇಂತಹ ಘಟನೆಗಳು ಮುಂದೆ ನಡೆಯದಂತೆ ಪೊಲೀಸ್ ಇಲಾಖೆ ಕೂಡ ಎಚ್ಚರವಹಿಸಬೇಕು ಮತ್ತು ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಚುರುಕುಗೊಳಿಸಬೇಕು ಎಂದು ಅಕ್ಷಿತ್ ಸುವರ್ಣ ಮನವಿ ಮಾಡಿದ್ದಾರೆ


Spread the love

Exit mobile version