ಬ್ಯಾರಿ ಸಾಹಿತ್ಯ ಅಕಾಡಮಿ 2024ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟ

Spread the love

ಬ್ಯಾರಿ ಸಾಹಿತ್ಯ ಅಕಾಡಮಿ 2024ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟ

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಕೊಡಮಾಡುವ 2024ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟಗೊಂಡಿದೆ.

ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ಬೆಂಗಳೂರು ಇದರ ಮಾಜಿ ಅಧ್ಯಕ್ಷ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಸದಸ್ಯ ಬೆಂಗಳೂರಿನ ಡಾ. ಮಕ್ಸೂದ್ ಅಹ್ಮದ್ ಮುಲ್ಕಿ (ಬ್ಯಾರಿ ಭಾಷೆ ಮತ್ತು ಸಂಘಟನೆ), ಬ್ಯಾರಿ ಕವಿ ಮತ್ತು ಲೇಖಕ ಹೈದರ್ ಅಲಿ ಕಾಟಿಪಳ್ಳ (ಬ್ಯಾರಿ ಸಾಹಿತ್ಯ), ಹಿರಿಯ ಬ್ಯಾರಿ ಹಾಡುಗಾರ, ಕವಿ ಪಿ.ಎಂ. ಹಸನಬ್ಬ ಮೂಡುಬಿದರೆ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬ್ಯಾರಿ ಅಕಾಡಮಿಯ ಮಾಜಿ ಸದಸ್ಯರಾದ ಟಿ.ಕೆ. ಶರೀಫ್, ಮುಹಮ್ಮದ್ ಶರೀಫ್ ನಿರ್ಮುಂಜೆ, ಹಂಝ ಮಲಾರ್, ಮರಿಯಮ್ ಇಸ್ಮಾಯಿಲ್ ಮತ್ತು ಲೇಖಕಿ ಶಮೀಮಾ ಕುತ್ತಾರ್ ಗೌರವ ಪ್ರಶಸ್ತಿಯ ಆಯ್ಕೆ ಸಮಿತಿಯಲ್ಲಿದ್ದು ಸಹಕರಿಸಿದ್ದಾರೆ. ಬ್ಯಾರಿ ಅಕಾಡಮಿಯ ಸ್ಥಾಯಿ ಸಮಿತಿ ಸಭೆ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿದೆ. ಪ್ರಶಸ್ತಿಯು ಐವತ್ತು ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕಗಳನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಆ.10ರಂದು ಮೈಸೂರಿನಲ್ಲಿ ನಡೆಯಲಿದೆ ಎಂದು ಅಕಾಡಮಿಯ ಅಧ್ಯಕ್ಷ ಉಮರ್ ಯು. ಎಚ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments