ಬ್ರಹ್ಮಾವರ: ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡ ಯುವತಿ ಆಸ್ಪತ್ರೆಯಲ್ಲಿ ಮೃತ್ಯು
ಉಡುಪಿ: ಮದುವೆಗೆ ನಿರಾಕರಿಸಿದ ಕಾರಣಕ್ಕಾಗಿ ಯುವಕನಿಂದ ಚೂರಿ ಇರಿತಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮಣಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತಪಟ್ಟ ಯುವತಿಯನ್ನು ಕೊಕ್ಕರ್ಣೆ ಚೆಗ್ರಿಬೆಟ್ಟು ನಿವಾಸಿ ರಕ್ಷಿತಾ (24 ವ) ಎಂದು ಗುರುತಿಸಲಾಗಿದೆ. ಆಕೆಯ ನೆರೆ ಮನೆಯಾತ ಆರೋಪಿ.
ಆರೋಪಿಯು ರಕ್ಷಿತಾಳನ್ನು ಮದುವೆಯಾಗುವ ಇಚ್ಛೆ ವ್ಯಕ್ತಪಡಿಸಿದ್ದ. ಆದರೆ ಆಕೆಯ ಮನೆಯವರು ನಿರಾಕರಿಸಿದ್ದರು. ರಕ್ಷಿತಾ ಕೂಡಾ ಆತನನ್ನು ಬ್ಲಾಕ್ ಮಾಡಿದ್ದಳು.
ಇದರಿಂದ ಕುಪಿತಗೊಂಡಿದ್ದ ಆರೋಪಿಯು ರಕ್ಷಿತಾ ಶುಕ್ರವಾರ ಬೆಳಗ್ಗೆ ಕೆಲಸಕ್ಕೆಂದು ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದಾಗ ಬಂದು ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದನು. ಆಕೆಯ ಹುಟ್ಟಿದ ದಿನದಂದೇ ಆಕೆಯ ಕುತ್ತಿಗೆ ಮತ್ತು ಎದೆಗೆ ಚಾಕುವಿನಿಂದ ಇರಿದಿದ್ದ. ಕುತ್ತಿಗೆ ಮತ್ತು ಎದೆಯ ಸುತ್ತ ಬಲ ಮತ್ತು ಎಡ ಪಕ್ಕೆಲುಬಿನ ಪ್ರದೇಶದಲ್ಲಿ ಇರಿತದಿಂದ ಗಂಭೀರ ಗಾಯವಾಗಿದ್ದು, ಅಲ್ಲಿ ಕುಸಿದು ಬಿದ್ದ ಆಕೆಯನ್ನು, ಸದ್ಯ ಆಕೆಗೆ ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆಕೆ ಸಂಜೆಯ ಹೊತ್ತಿಗೆ ಮೃತಪಟ್ಟಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.