ಬ್ರಹ್ಮಾವರ: ಮಗುವನ್ನು ಕೊಲೆ ಮಾಡಿ ತಾಯಿ ಆತ್ಮಹತ್ಯೆ!
ಬ್ರಹ್ಮಾವರ: ಮಗುವಿಗೆ ನೇಣುಬಿಗಿದು ಕೊಲೆ ಮಾಡಿ ಬಳಿಕ ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಹೆರಂಜೆ ಕ್ರಾಸ್ ಬಳಿ ಸೋಮವಾರ ಸಂಭವಿಸಿದೆ.
ಮೃತರನ್ನು ಸುಷ್ಮೀತಾ (23) ಹಾಗೂ ಮಗು ಶ್ರೇಷ್ಠ (1.6ವ) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ಮೂಲಗಳ ಪ್ರಕಾರ ಸುಷ್ಮೀತಾ ಅವರ ಪತಿ ತನ್ನ ಹಳೆಯ ಕೇಸಿಗೆ ಸಂಬಂಧಿಸಿ ಬೆಂಗಳೂರು ನ್ಯಾಯಾಲಯಕ್ಕೆ ತೆರಳಿದ್ದು ಈ ವೇಳೆ ಮನೆಗೆ ಪೋಲಿಸರು ಬಂದು ಈಕೆಯನ್ನು ಪತಿಯ ಹಳೆ ಪ್ರಕರಣಕ್ಕೆ ಸಂಬಂಧಿಸಿ ಬೆದರಿಸಿದ್ದಾರೆ ಎನ್ನಲಾಗಿದೆ. ಇದರಿಂದ ಹೆದರಿದ ಪತ್ನಿ ಮಗುವಿಗೆ ನೇಣು ಬಿಗಿದು ಕೊಲೆ ಮಾಡಿ ಬಳಿಕ ತಾನೂ ಕೂಡ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ