ಭಕ್ತರ ಕೊರೀಕೆಯ ಮೇರೆಗೆ ದೇವಸ್ಥಾನಗಳಲ್ಲಿ ಆನ್ ಲೈನ್ ಸೇವೆ ಆರಂಭಿಸಲಾಗಿದೆ – ಸಚಿವ ಕೋಟ ಶ್ರೀನಿವಾಸ ಪೂಜಾರಿ

Spread the love

ಭಕ್ತರ ಕೊರೀಕೆಯ ಮೇರೆಗೆ ದೇವಸ್ಥಾನಗಳಲ್ಲಿ ಆನ್ ಲೈನ್ ಸೇವೆ ಆರಂಭಿಸಲಾಗಿದೆ – ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಲಾಕ್ ಡೌನ್ ನಿಂದ ಭಕ್ತರಿಗೆ ದೇವಸ್ಥಾನಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲದರ ಪ್ರಯುಕ್ತ ಹರಕೆ ಹೊತ್ತ ಭಕ್ತರಿಗೆ ಆನ್ಲೈನ್ ಸೇವೆಯಿಂದ ಅನುಕೂಲವಾಗಲಿದೆ ಎಂದು ರಾಜ್ಯದ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಅವರು ಶನಿವಾರ ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಆನ್ ಲೈನ್ ಸೇವೆ ಆರಂಭಿಸಿರುವ ಬಗ್ಗೆ ಕೆಲವರು ಆಕ್ಷೇಪ ಮಾಡಿದ್ದಾರೆ. ಆದರೆ ಆನ್ ಲೈನ್ ಸೇವೆ ನಮ್ಮ ಇಲಾಖೆಯಲ್ಲಿ ಈ ಮೊದಲೇ ಇದ್ದು, ಈಗ ಮತ್ತಷ್ಟು ದೇವಸ್ಥಾನಗಳನ್ನು ಆನ್ ಲೈನ್ ಸೇವೆಯ ವ್ಯಾಪ್ತಿಗೆ ಇಲಾಖೆ ತರುತ್ತಿದೆ.

ಕೊಲ್ಲೂರು ದೇವಸ್ಥಾನದಲ್ಲಿ ಕಳೆದ ವರ್ಷ ಮೂರು ಸಾವಿರ ಆನ್ಲೈನ್ ಸೇವೆಗಳು ಬಂದಿವೆ ಅಲ್ಲದೆ ಮೈಸೂರು ಚಾಮುಂಡೇಶ್ವರಿ ದೇವಸ್ಥಾನದಲ್ಲೂ ಆನ್ ಲೈನ್ ಸೇವೆಯಿದೆ. ಕಳೆದ ವರ್ಷ ಈ ಆನ್ ಲೈನ್ ಸೇವೆಯಿಂದ 49.50 ಲಕ್ಷ ರುಪಾಯಿ ಜಮಾ ಆಗಿದೆ ಎಂದರು.

ಲಾಕ್ಡೌನ್ ನಿಂದ ಭಕ್ತರಿಗೆ ದೇವಸ್ಥಾನಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ಹರಕೆ ಹೊತ್ತ ಭಕ್ತರಿಗೆ ಆನ್ಲೈನ್ ಸೇವೆಯಿಂದ ಅನುಕೂಲವಾಗಲಿದೆ. ಭಕ್ತರಿಗೆ ನೆಮ್ಮದಿ ಸಿಗಲಿ ಎಂಬ ಕಾರಣಕ್ಕೆ ಆನ್ ಲೈನ್ ಆರಂಭಿಸಿದ್ದೇವೆ. ಭಕ್ತರಿಗೆ ಲಾಕ್ ಡೌನ್ ವರೆಗಾದರೂ ಆನ್ಲೈನ್ ಸೇವೆಯ ಅಗತ್ಯವಿದೆ. ಭಕ್ತರ ಕೋರಿಕೆ ಹಿನ್ನೆಲೆಯಲ್ಲಿ ಈ ಸೇವೆ ಆರಂಭವಾಗಿದೆ.

ದೇವಸ್ಥಾನಗಳಿಗೆ ಬಾಗಿಲು ಹಾಕಿದೆ ಪೂಜೆ ಆಗುತ್ತಿಲ್ಲ ಎಂದು ಸುದ್ದಿಯಾಗುತ್ತಿದೆ ಆದರೆಎಲ್ಲಾ ದೇವಸ್ಥಾನಗಳನ್ನು ಸಾಂಪ್ರದಾಯಿಕ ಪೂಜೆ ನಡೆಯುತ್ತದೆ. ಎಲ್ಲಾ ದೇವಸ್ಥಾನಗಳಲ್ಲಿ ತ್ರಿಕಾಲ, ಕಾಲಮಿತಿಯ ಪೂಜೆಗಳು ನಡೆಯುತ್ತಿವೆ. ದೇವಸ್ಥಾನದಲ್ಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅನಿವಾರ್ಯತೆ ಇದೆ ಆದ್ದರಿಂದ ಲಾಕ್ ಡೌನ್ ಮುಗಿದ ನಂತರವೇ ದೇವಸ್ಥಾನ ತೆರೆಯುವ ಅನಿವಾರ್ಯತೆ ಇದೆ ಎಂದರು.


Spread the love