ಭಾರತೀಯ ಸೇನೆ ಹೆಸರಿನಲ್ಲಿ ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
ಉಡುಪಿ: ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಸೂಚನೆಯ ಮೇರೆಗೆ ಉಡುಪಿ ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಲ್ಲಿ ಇಂದು ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗುವಂತೆ ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.
ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಿ ಕರುಣಿಸಲಿ ಎಂದು ವಿಶೇಷ ಸಂಕಲ್ಪದೊಂದಿಗೆ ವಿಶೇಷ ಪೂಜೆ ಮಾಡಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಅನುವಂಶಿಕ ಮೊಕ್ತೇಸರರಾದ ಐತು ಎಮ್ ಶೆಟ್ಟಿ, ಅರ್ಚಕರಾದ ಶ್ರೀಧರ ಭಟ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್, ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೋಭಾ ಡಿ ನಾಯಕ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಭೋಜ ಶೆಟ್ಟಿ, ವೆಂಕಟೇಶ್ ಕುಲಾಲ್, ಪ್ರಭಾಕರ ಅಂಚನ್, ಮಮತಾ ಶೆಟ್ಟಿ, ಅನುಶಾ ಆಚಾರ್ಯ, ಭಕ್ತವೃಂದದ ಅಧ್ಯಕ್ಷರಾದ ಉದಯ ಶೆಟ್ಟಿ, ಶಂಕರ್ ಶೆಟ್ಟಿ ಪಂಚಾಯತ್ ಸದಸ್ಯರಾದ ಪ್ರಥ್ವಿರಾಜ್ ಶೆಟ್ಟಿ, ಮಂಜು ಆಚಾರ್ಯ, ಪ್ರಮುಖರಾದ ಧನಂಜಯ ಕುಂದರ್, ಸುರೇಶ್ ಕುಮಾರ್, ಶಿರಿಶ್ ಶೆಟ್ಟಿ, ಸೂರಜ್, ಗೋಪಾಲ್ ಗಾಣಿಗ, ಕೆಳಾರ್ಕಳ ಬೆಟ್ಟು ವೀರಮಾರುತಿ ವ್ಯಾಯಾಮ ಶಾಲೆಯ ಶಶಿಕಾಂತ್, ಪ್ರದೀಪ್ ಅಂಚನ್, ಪ್ರಸಾದ್ ಪಾಲನ್, ಮೋಹನ್ ಸುವರ್ಣ, ಪ್ರಜ್ವಲ್ ಅಂಚನ್, ನಾಗೇಶ್ ಕಲ್ಪನಾ ಸುರೇಶ್, ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಇದರ ನೈನಾ ಜೆ ಶೆಟ್ಟಿ, ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಹಲವಾರು ಭಕ್ತಾದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.