Spread the love
ಭಾರಿ ಮಳೆ ಹಿನ್ನಲೆ – ಅ.25ರಂದು ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲೆ, ಕಾಲೇಜುಗಳಿಗೆ ಅಕ್ಟೋಬರ್ 25 (ಇಂದು)ರಂದು ರಜೆ ಘೊಷಣೆ ಮಾಡಿ ಜಿಲ್ಲಾಧಿಕಾರಿ ಜಿ ಜಗದೀಶ್ ಆದೇಶ ಮಾಡಿದ್ದಾರೆ.
ಅರಬ್ಬಿ ಸಮುದ್ರ ಹಾಗೂ ಲಕ್ಷದ್ವೀಪ ಭಾಗಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಶುಕ್ರವಾರದಂದು ಉಡುಪಿ ಜಿಲ್ಲೆಗ ರೆಡ್ ಅಲರ್ಟ್ ಘೋಷಿಸಿದೆ. ಕೇರಳ, ಕರ್ನಾಟಕ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಅಲ್ಲಲ್ಲಿ ಮುಂದಿನ ಎರಡು ದಿನಗಳವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುತ್ತದೆ. ಇದಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Spread the love














Iti Raje Elva
Confirma