ಭಾರಿ ಮಳೆ ಹಿನ್ನಲೆ – ಅ.26ರಂದು ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

Spread the love

ಭಾರಿ ಮಳೆ ಹಿನ್ನಲೆ – ಅ.26ರಂದು ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲೆ, ಕಾಲೇಜುಗಳಿಗೆ ಅಕ್ಟೋಬರ್ 26 ರಂದು ಶನಿವಾರ ರಜೆ ಘೊಷಣೆ ಮಾಡಿ ಜಿಲ್ಲಾಧಿಕಾರಿ ಜಿ ಜಗದೀಶ್ ಆದೇಶ ಮಾಡಿದ್ದಾರೆ.

ಅರಬ್ಬಿ ಸಮುದ್ರ ಹಾಗೂ ಲಕ್ಷದ್ವೀಪ ಭಾಗಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ನಾಳೆ ಶನಿವಾರ ಗಂಟೆಗೆ 40-45ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಅಲ್ಲದೆ ಮೀನುಗಾರರು ಕಡಲಿಗಿಳಿಯದಂತೆ ಎಚ್ಚರಿಕೆ ನೀಡಿದ್ದು ಪ್ರವಾಸಿಗರಿಗೂ ಕಡಲ ಕಿನಾರೆಯಲ್ಲಿ ನೀರಿಗಿಳಿಯದಂತೆ ನಿರ್ಬಂಧ ಹೇರಿದೆ. ಈವರೆಗೆ ಉಡುಪಿ ಜಿಲ್ಲೆಯಲ್ಲಿ 75ಮಿಲಿಮೀಟರ್ ಮಳೆಯಾಗಿದೆ

 

 


Spread the love