ಭಾರೀ ಮಳೆ: ಅಗಸ್ಟ್ 7ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ  ರಜೆ

Spread the love

ಭಾರೀ ಮಳೆ: ಅಗಸ್ಟ್ 7ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ  ರಜೆ

ಉಡುಪಿ: ಭಾರೀ ಮಳೆಯಾಗುತ್ತಿರುವ ಕಾರಣ ಬುಧವಾರ ಅಗಸ್ಟ್ 7ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಕಳೆದ ಒಂದು ದಿನದಿಂದ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಒಂದು ದಿನದ ರಜೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.


Spread the love