ಭಾರೀ ಮಳೆ: ಅ.26ರಂದು ದ.ಕ. ಜಿಲ್ಲೆಯ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ರಜೆ

Spread the love

ಭಾರೀ ಮಳೆ: ಅ.26ರಂದು ದ.ಕ. ಜಿಲ್ಲೆಯ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ರಜೆ

ಮಂಗಳೂರು : ಅರಬ್ಬಿ ಸಮುದ್ರ ಹಾಗೂ ಲಕ್ಷ ದ್ವೀಪಗಳಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪ್ರಭಾವದಿಂದ ಕರಾವಳಿಯಲ್ಲಿ ನಿರಂತರವಾಗಿ ವ್ಯಾಪಕ ಮಳೆ ಸುರಿಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಪದವಿ ಪೂರ್ವ ತರಗತಿವರೆಗೆ) ಅ.26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿಂಧು ರೂಪೇಶ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಈಗಾಗಲೇ ‘ರೆಡ್ ಅಲರ್ಟ್’ ಘೋಷಿಸಿವೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರರು ಮುಂಜಾಗ್ರತೆ ವಹಿಸಬೇಕು. ಮೀನುಗಾರರಿಗೆ ಮುಂದಿನ ಮೂರು ದಿನಗಳವರೆಗೆ ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ಜಿಲ್ಲಾಧಿಕಾರಿ ಕಚೇರಿ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಪ್ರವಾಸಿಗರು/ಸಾರ್ವಜನಿಕರು ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು.


Spread the love