Spread the love
ಭಾರೀ ಮಳೆ: ಜು.24ರಂದು ಬಂಟ್ವಾಳ, ಮೂಡಬಿದರೆ, ಕಡಬ, ಉಳ್ಳಾಲ ತಾಲೂಕಿನ ಎಲ್ಲಾ ವಿದ್ಯಾ ಸಂಸ್ಥೆಗಳಿಗೆ ರಜೆ
ಮಂಗಳೂರು: ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಹಾಗೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜು.24ರ ಗುರುವಾರ ಬಂಟ್ವಾಳ, ಮೂಡಬಿದರೆ, ಕಡಬ, ಉಳ್ಳಾಲ ತಾಲೂಕಿನ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದಾರೆ.
Spread the love