ಭಾರೀ ಮಳೆ: ನಾಳೆ (ಆ. 3) ದಕ ಜಿಲ್ಲೆಯ ಶಾಲೆ, ಪಿಯು, ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಣೆ

Spread the love

ಭಾರೀ ಮಳೆ: ನಾಳೆ (ಆ. 3) ದಕ ಜಿಲ್ಲೆಯ ಶಾಲೆ, ಪಿಯು, ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

1. ಜಿಲ್ಲೆಯಲ್ಲಿ ಈ ಕೆಳಗಿನ ಎಲ್ಲಾ ಸಂಸ್ಥೆಗಳಿಗೆ ದಿನಾಂಕ 03.08.2026 ರಜೆಯನ್ನು ಘೋಷಿಸಲಾಗಿದೆ ಹಾಗೂ ಇದನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಪ್ರಕಾರ ನಿಯಾಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು

ಮಂಗಳೂರು ಉಪವಿಭಾಗದ ತಾಲೂಕುಗಳಾದ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ, ಉಳ್ಳಾಲ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢ ಶಾಲೆಗಳು 10 ನೇ ತರಗತಿಯವರೆಗೆ (ಎಲ್ಲಾ ವಸತಿ ಶಾಲೆಗಳೂ ಸೇರಿದಂತೆ)

ಪುತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಕೇಂದ್ರ ಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢ ಶಾಲೆಗಳು & ಪದವಿ ಪೂರ್ವ ಕಾಲೇಜು, ಎಲ್ಲಾ ITI ಮತ್ತು Diploma ಕಾಲೇಜುಗಳು 12 ನೇ ತರಗತಿಯವರೆಗೆ ( ಎಲ್ಲಾ ವಸತಿ ಶಾಲಾ ಕಾಲೇಜುಗಳೂ ಸೇರಿದಂತೆ)

2. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.

3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

5. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

6. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.


Spread the love
Subscribe
Notify of

0 Comments