Spread the love
ಭಾರೀ ಮಳೆ: ನಾಳೆ (ಗುರುವಾರ) ಉಡುಪಿ ಜಿಲ್ಲೆಯ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ
ಉಡುಪಿ: ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜೂನ್ 11 ರ ಹವಾಮಾನ ಇಲಾಖೆಯ ರೆಡ್ ಆಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 12 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ನೀಡಿದ್ದಾರೆ
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ,
Spread the love