ಭಾರೀ ಮಳೆ ಸಾಧ್ಯತೆ: ಉಡುಪಿ ಜಿಲ್ಲೆಯಲ್ಲಿ ‘ರೆಡ್ ಅಲರ್ಟ್’ ಘೋಷಣೆ

Spread the love

ಭಾರೀ ಮಳೆ ಸಾಧ್ಯತೆ: ಉಡುಪಿ ಜಿಲ್ಲೆಯಲ್ಲಿ ‘ರೆಡ್ ಅಲರ್ಟ್’ ಘೋಷಣೆ

ಉಡುಪಿ: ಕರ್ನಾಟಕ ಕರಾವಳಿಯಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಹೆಚ್ಚು (ರೆಡ್ ಅಲರ್ಟ್) ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದಿರಲು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಟಿ ಆದೇಶ ಹೊರಡಿಸಿದ್ದಾರೆ.

ಶನಿವಾರದಿಂದ ಸೋಮವಾರದವರೆಗೆ ಪ್ರತಿದಿನ 200 ಮಿ.ಲಿ ಮೀಟರ್ ಗಿಂತ ಮೇಲ್ಪಟ್ಟು ಮಳೆಯಾಗುವ ನಿರೀಕ್ಷೆಯಿದ್ದು, ಮೀನುಗಾರರು ಕಡ್ಡಾಯವಾಗಿ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ದಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು ಮತ್ತು ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರ ಪ್ರದೇಶಗಳಿಗೆ ಪಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಲು ಸೂಚಿಸಲಾಗಿದೆ.

ಭಾರಿ ಮಳೆಯ ಹಿನ್ನಲೆಯಲ್ಲಿ ತುರ್ತು ಸೇವೆಗಾಗಿ ಟೋಲ್ ಫ್ರೀ ಸಂಖ್ಯೆ ನೀಡಲಾಗಿದೆ. ತುರ್ತು ಸೇವೆಯ ಕಂಟ್ರೋಲ್ ರೂಮ್ 24*7 ಕಾರ್ಯನಿರ್ವಹಿಸಲಿದೆ.

ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ: 1077,ದೂರವಾಣಿ ಸಂಖ್ಯೆ: 0820-2574802 / 2574360


Spread the love