ಭಾಷಾ ಅಲ್ಪಸಂಖ್ಯಾತರ ಮೇಲೆ ಬಲವಂತವಾಗಿ ಮಲಯಾಳಂ ಭಾಷೆ ಹೇರಲು ಆಗೋಲ್ಲ- ಸಿಎಂ ಸಿದ್ದರಾಮಯ್ಯ
ಮಂಗಳೂರು: ಕೇರಳದಲ್ಲಿ ಕನ್ನಡ ಮಾಧ್ಯಮದಲ್ಲಿ ಮಲೆಯಾಳಂ ಭಾಷೆ ಹೇರಿಕೆ ಬಗ್ಗೆ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯಿಸಿ, ಅವರು ಕಾನೂನು ಮಾಡಿದ್ದಾರೆ, ಆದರೆ ಆ ರೀತಿ ಮಾಡಲು ಬರಲ್ಲ. ಭಾಷಾ ಅಲ್ಪಸಂಖ್ಯಾತರ ಮೇಲೆ ಬಲವಂತವಾಗಿ ಮಲಯಾಳಂ ಭಾಷೆಯನ್ನು ಹೇರಿಕೆ ಮಾಡುತ್ತಿದ್ದರೆ. ಹಾಗೆ ಮಾಡಲು ಬರೋದಿಲ್ಲ. ಬೇರೆ ಮಾತೃಭಾಷೆ ಮಾತನಾಡುವವರಿಗೆ ಮಲಯಾಳಂ ಅನ್ನೇ ಕಲಿಯಬೇಕು ಅನ್ನುವುದಕ್ಕಾಗುವುದಿಲ್ಲ ಎಂದು ಹೇಳಿದರು.
ರಾಜ್ಯಪಾಲರು ಸಹಿ ಹಾಕಿ ಅದು ಕಾನೂನು ಆದಲ್ಲಿ ನಾವು ಹೋರಾಟ ಮಾಡಬೇಕಾದ ಪರಿಸ್ಥಿತಿ ಉಂಟಾಗುತ್ತದೆ. ಕೇಂದ್ರ ಸರಕಾರ ಮತ್ತು ರಾಷ್ಟ್ರಪತಿಗೆ ಮನವಿ ಮಾಡಲಾಗುತ್ತದೆ ಎಂದರು.
ಒಳಮೀಸಲಾತಿ, ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ದ್ವೇಷ ಭಾಷಣ ಸೇರಿದಂತೆ ರಾಜ್ಯಪಾಲರು ಮೂರು ಕಾಯ್ದೆಯನ್ನು ವಾಪಾಸ್ ಕಳುಹಿಸಿರುವ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಕೆಲವು ಸ್ಪಷ್ಟನೆ ಕೇಳಿದ್ದಾರೆ. ಅವರಿಗೆ ಮನವರಿಕೆ ಮಾಡುವ ಕೆಲಸ ಮಾಡಲಾಗುತ್ತಿದೆ ಎಂದರು.













