ಭಿನ್ನಾಭಿಪ್ರಾಯ ಮರೆತು ಮೈತ್ರಿ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಾಗಿ ದುಡಿಯೋಣ – ಪ್ರಮೋದ್ ಮಧ್ವರಾಜ್

Spread the love

ಭಿನ್ನಾಭಿಪ್ರಾಯ ಮರೆತು ಮೈತ್ರಿ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಾಗಿ ದುಡಿಯೋಣ – ಪ್ರಮೋದ್ ಮಧ್ವರಾಜ್

ಉಡುಪಿ: ‘ಕಾಂಗ್ರೆಸ್‌ ಮತ್ತು ಜೆಡಿಎಸ್ ಮಧ್ಯೆ ಭಿನ್ನಾಭಿಪ್ರಾಯ ಇರುವುದು ಸಹಜ. ಆದರೆ ಅವೆಲ್ಲವನ್ನೂ ಬದಿಗಿಟ್ಟು ನಾವು ಬಿಜೆಪಿಯನ್ನು ಸೋಲಿಸಲು ಒಟ್ಟಾಗಿ ದುಡಿಯಬೇಕಾಗಿದೆ’ ಎಂದು ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್, ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಪ್ರಮೋದ್ ಮದ್ವರಾಜ್ ಹೇಳಿದರು.

ಜೆಡಿಎಸ್ ಕಚೇರಿಗೆ ಭಾನುವಾರ ಭೇಟಿ ನೀಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಉಳಿವಿನ ದೃಷ್ಟಿಯಿಂದ ಜೆಡಿಎಸ್ ವರಿಷ್ಠರಾದ ದೇವೇಗೌಡರು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕೇಳಿದರು. ಕಾಂಗ್ರೆಸ್ ವರಿಷ್ಠರ ಅನುಮತಿ ಪಡೆದು ಒಪ್ಪಿಕೊಂಡಿದ್ದೇನೆ ಎಂದರು.

‘ಶೋಭಾ ಕರಂದ್ಲಾಂಜೆ ಅವರಿಗೆ ಮೋದಿಯ ಹೆಸರಿನಲ್ಲಿ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದು ಎಂಬ ಅಹಂಕಾರ ಇದೆ. ಅವರು ಕ್ಷೇತ್ರದ ಅಭಿವೃದ್ಧಿಗೆ ಏನೂ ಮಾಡಿಲ್ಲ. ನಾನು ಗೆದ್ದು ಸಂಸದನಾದಲ್ಲಿ ಎರಡೂ ಪಕ್ಷದ ಕಾರ್ಯಕರ್ತರನ್ನು ಸಮಾನವಾಗಿ ಕಾಣುತ್ತೇನೆ’ ಎಂದರು. ಜೆಡಿಎಸ್ ಮುಖಂಡರಾದ ಎಂ.ಬಿ. ಸದಾಶಿವ ಮಾತನಾಡಿ, ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲಲೇ
ಬೇಕಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಜೆಡಿಎಸ್ ಅದ್ಯಕ್ಷ ಯೋಗೀಶ್ ಶೆಟ್ಟಿ,ದ.ಕ. ಜಿಲ್ಲಾ ಅಧ್ಯಕ್ಷಮೊಹಮ್ಮದ್ ಕುಂಞ, ಮುಖಂಡರಾದ ಅಮರನಾಥ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಬಾವಾ, ಎಂ.ಎ.ಗಫೂರ್ ಇದ್ದರು.


Spread the love