ಭೂಕುಸಿತ: ಶಿರಾಡಿ ಘಾಟಿ ತಾತ್ಕಾಲಿಕ ಬಂದ್
ಹಾಸನ: ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಭೂಕುಸಿತ ಸಂಭವಿಸಿದ್ದು ಶಿರಾಡಿ ಮಾರ್ಗದಲ್ಲಿ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುವ ವಾಹನಗಳು ಹಾಸನದಿಂದ ಬೇಲೂರು ಮಾರ್ಗವಾಗಿ ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.
ಮಂಗಳೂರಿನಿಂದ ಬೆಂಗಳೂರಿಗೆ ಬರುವ ವಾಹನಗಳು ಸಂಪಾಜೆ ಮತ್ತು ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಸಂಚರಿಸಿಲಿವೆ ಎಂದು ತಿಳಿಸಿದ್ದಾರೆ.