ಭೂಗತಪಾತಕಿ ರವಿ ಪೂಜಾರಿ ಪೊಲೀಸ್ ವಶಕ್ಕೆ?

Spread the love

ಭೂಗತಪಾತಕಿ ರವಿ ಪೂಜಾರಿ ಪೊಲೀಸ್ ವಶಕ್ಕೆ?

ನವದೆಹಲಿ: ಭಾರತದ ಕುಖ್ಯಾತ ಭೂಗತಪಾತಕಿ ರವಿ ಪೂಜಾರಿಯನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಬರೋಬ್ಬರಿ 15 ವರ್ಷಗಳಿಂದ ಬೇರೆ ಬೇರೆ ದೇಶಗಳಲ್ಲಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ಇಂದು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಭೂಗತವಾಗಿದ್ದುಕೊಂಡೆ ಕ್ರಿಮಿನಲ್ ಚಟುವಟಿಕೆ ನಡೆಸುತ್ತಿದ್ದ ರವಿ ಪೂಜಾರಿ ಮೇಲೆ ದೇಶದ ವಿವಿಧ ರಾಜ್ಯದಲ್ಲಿ ಪ್ರಕರಣಗಳು ದಾಖಲಾಗಿದೆ.

ರವಿ ಪೂಜಾರಿ ಬಂಧನಕ್ಕೆ ಭಾರತ ಸರ್ಕಾರ ಪಶ್ಚಿಮ ಆಫ್ರಿಕಾ ದೇಶದವಾದ ಸೆನೆಗಲ್ ನೊಂದಿಗೆ ಸಂಪರ್ಕದಲ್ಲಿತ್ತು ಎನ್ನಲಾಗಿದ್ದು, ಸಿಸಿಬಿಯ ಹಿಟ್ ಲಿಸ್ಟ್ ನಲ್ಲಿದ್ದ. ಈ ಕುರಿತು ಭಾರತದ ಸರ್ಕಾರಕ್ಕೆ ಸೆನೆಗಲ್ ಸರ್ಕಾರ ಮಾಹಿತಿ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದ್ದು, ಆದರೆ ಅಧಿಕೃತ ಆಗಬೇಕಿದೆ. ಸದ್ಯ ಪೊಲೀಸ್ ವಶದಲ್ಲಿ ಇರುವ ರವಿ ಪೂಜಾರಿ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ರವಿ ಪೂಜಾರಿಯ ಬಂಧನ ಬಗ್ಗೆ ಖಚಿತ ಮಾಹಿತಿ ಲಭಿಸಿದ್ದರು, ಯಾವ ಕಾರಣಕ್ಕಾಗಿ ಬಂಧನ ಮಾಡಲಾಗಿದೆ ಹಾಗೂ ವಿಚಾರಣೆ ಕುರಿತು ಹೆಚ್ಚಿನ ಮಾಹಿತಿ ಲಭಿಸಬೇಕಿದೆ. ಪೊಲೀಸ್ ಬಂಧನ ಮಾಡಿ ವಿಚಾರಣೆ ನಡೆಸಿದ ಬಳಿಕ ಭಾರತಕ್ಕೆ ಹಸ್ತಾಂತರ ಮಾಡಲಿದ್ದರಾ ಎಂಬ ಬಗ್ಗೆಯೂ ಮಾಹಿತಿ ಲಭಿಸಬೇಕಿದೆ.


Spread the love