Home Mangalorean News Kannada News ಮಂಗಳೂರಿಗೆ ಆ್ಯಂಟಿ ಕಮ್ಯೂನಲ್ ಫೋರ್ಸ್ ರಚನೆ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

ಮಂಗಳೂರಿಗೆ ಆ್ಯಂಟಿ ಕಮ್ಯೂನಲ್ ಫೋರ್ಸ್ ರಚನೆ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

Spread the love

ಮಂಗಳೂರಿಗೆ ಆ್ಯಂಟಿ ಕಮ್ಯೂನಲ್ ಫೋರ್ಸ್ ರಚನೆ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಗಳೂರಿನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಷ್ಟೇ ಪ್ರಭಾವಿಗಳಾದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ. ಸೌಹಾರ್ದತೆ ಮೂಡಿಸಲು ಏನು ಬೇಕೋ ಅದನ್ನು ಮಾಡುತ್ತೇವೆ. ಆ್ಯಂಟಿ ಕಮ್ಯೂನಲ್ ಫೋರ್ಸ್ ರಚನೆ ಬಗ್ಗೆ ಚರ್ಚೆ ಮಾಡುತ್ತೇವೆ. ಕಾನೂನು ರೀತಿಯ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗುರುವಾರ ಬೆಳಿಗ್ಗೆ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಮಂಗಳೂರಿನಲ್ಲಿ ಸೌಹಾರ್ದತೆ ಬೆಳಯಬೇಕು. ಹಿಂದೂ ಮುಸ್ಲಿಮರ ನಡುವೆ ದ್ವೇಷ ಬೆಳೆಯಬಾರದು. ಆ ಬಗ್ಗೆ ಚರ್ಚೆ ಮಾಡಿದೆವು.   ಎಂದು ಸಿಎಂ ತಿಳಿಸಿದರು.

ಮಳೆಯ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಸಿಇಒಗಳು, ಜಿಲ್ಲಾ ಉಸ್ತುವಾರಿ ಸಚಿವರು, ಸೆಕ್ರೆಟರಿಗಳ ಜೊತೆ ನಾಳೆ ಸಭೆ ಮಾಡುತ್ತೇನೆ. ನಾಳೆ ಮತ್ತು ನಾಡಿದ್ದು ಎರಡು ದಿನ ಸಭೆ ಇರಲಿದೆ. ಎಲ್ಲಾ ಸಚಿವರು ಭಾಗಿಯಾಗುತ್ತಾರೆ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.


Spread the love

Exit mobile version