ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ

Spread the love

ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ

ಮಂಗಳೂರು: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA)ಯನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಅವರಿಂದ ಮಾದಕ ವಸ್ತು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಮೊಹಮ್ಮದ್ ನದೀಂ (27), ಹಲಸೂರು, ಬೆಂಗಳೂರು ನಿವಾಸಿ, ಉಮರುಲ್ ಫಾರೂಕ್ (30), ಉಚ್ಚಿಲ, ಸೋಮೇಶ್ವರ ನಿವಾಸಿ ಹಾಗೂ ಇಮ್ತಿಯಾಜ್ ಇಸ್ಮಾಯಿಲ್ ಕಿನ್ಯಾ (41), ಕಿನ್ಯಾ, ಕೆ.ಸಿ.ರೋಡ್, ಮಂಗಳೂರು ನಿವಾಸಿ ಎಂದು ಗುರುತಿಸಲಾಗಿದೆ.

ಜೂನ್ 23ರಂದು ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರಿನಲ್ಲಿರುವ ಲಾಡ್ಜ್ ಒಂದರಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎಯನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಸಿಸಿಬಿ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದರು.

ದಾಳಿಯ ವೇಳೆ ಆರೋಪಿಗಳಿಂದ ಎಂಡಿಎಂಎ ಮಾದಕ ವಸ್ತು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಯಿತು.

ಈ ಸಂಬಂಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 66/2026ರಡಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ) ಹಾಗೂ 22(ಸಿ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಬಂಧಿತ ಆರೋಪಿಗಳನ್ನು ಜೂನ್ 24ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Subscribe
Notify of

0 Comments