Home Mangalorean News Kannada News ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ  ಕಾಂಗ್ರೆಸ್ ಆಗ್ರಹ 

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ  ಕಾಂಗ್ರೆಸ್ ಆಗ್ರಹ 

Spread the love

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ  ಕಾಂಗ್ರೆಸ್ ಆಗ್ರಹ 

ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್ ಸೇವೆಯ ಸಮಸ್ಯೆ ನಿವಾರಿಸಲು ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜಾ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿ , ಮಂಗಳೂರಿನ ಪಾಸ್‌ಪೋರ್ಟ್ ಸೇವಾ ಕೇಂದ್ರಕ್ಕೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಸೇರಿದಂತೆ ಹಲವು ಜಿಲ್ಲೆಗಳಿಂದ ದಿನಕ್ಕೆ ಸರಾಸರಿ 600 ಅರ್ಜಿದಾರರು ಆಗಮಿಸುತ್ತಾರೆ. ಆದರೆ ಸಿಬ್ಬಂದಿ ಕೊರತೆ, ಸೀಮಿತ ಸ್ಥಳಾವಕಾಶ, ಆಸನ ಹಾಗೂ ಮೂಲಸೌಕರ್ಯಗಳ ಕೊರತೆಯಿಂದ ಅರ್ಜಿದಾರರು ಗಂಟೆಗಟ್ಟಲೆ ಕಾಯಬೇಕಾಗಿದೆ ಎಂದು ಅವರು ಆರೋಪಿಸಿದರು.

ಸುಮಾರು 2,500ರಿಂದ 2,800 ಚದರ ಅಡಿ ಪ್ರದೇಶದಲ್ಲಿರುವ ಕೇಂದ್ರದಲ್ಲಿ ದಿನಕ್ಕೆ 600 ಅರ್ಜಿಗಳ ಒತ್ತಡವಿದೆ. ವೃದ್ಧರು, ಮಕ್ಕಳು ಹಾಗೂ ಮಹಿಳೆಯರು ಕೂಡ ತೊಂದರೆ ಅನುಭವಿಸುತ್ತಿದ್ದಾರೆ. ಜೆರಾಕ್ಸ್ ಕೇಂದ್ರದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆಯೂ ಇಲ್ಲ ಎಂದು ಅವರು ದೂರಿದರು.

ಕರ್ನಾಟಕದಲ್ಲಿ ಒಂದೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ಇರುವುದರಿಂದ ಹೆಚ್ಚಿನ ಹೊರೆ ಬೀಳುತ್ತಿದೆ. ಹೀಗಾಗಿ ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ಸ್ಥಾಪಿಸಿ, ಸಿಬ್ಬಂದಿ ಹಾಗೂ ಮೂಲಸೌಕರ್ಯ ಹೆಚ್ಚಿಸಬೇಕು . ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು ಈ ಬಗ್ಗೆ ಗಮನ ಹರಿಸಬೇಕೆಂದು ಅವರು ಒತ್ತಾಯಿಸಿದರು .

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಶುಭಾಷ್ ಚಂದ್ರ, ವಹಾಬ್, ಪ್ರಕಾಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version