Home Mangalorean News Kannada News ಮಂಗಳೂರಿನ ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ದುಬೈ U.A.E ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ

ಮಂಗಳೂರಿನ ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ದುಬೈ U.A.E ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ

Spread the love

ಮಂಗಳೂರಿನ ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ದುಬೈ U.A.E ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ

ದುಬೈ: ಮಂಗಳೂರು ಜಿಲ್ಲೆಯ ಉಪ್ಪಿನಂಗಡಿಯ ಸಮೀಪದ ವಳಾಲ್, ಬಜತೂರು ಗ್ರಾಮದ ಪಟ್ಟೆ ಮನೆ ಅಮಿಷ ಆನಂದ್ ಇದೇ ಬರುವ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 4 ರ ವರೆಗೆ ಶ್ರೀಲಂಕಾದ ಕೊಲಂಬೋ ದಲ್ಲಿ ನಡೆಯಲಿರುವ ಅಂಡರ್ 22 ವಯೋ ವಿಭಾಗದ ಹುಡಿಗಿಯರ ಇಂಡೋರ್ ವಿಶ್ವಕಪ್ ಕ್ರಿಕೆಟ್ ಕೂಟಕ್ಕೆ ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾಳೆ . ಈ ಕ್ರಿಕೆಟ್ ಪಂದ್ಯ ಕೂಟದಲ್ಲಿ U.A.E ಸೇರಿದಂತೆ ಆಸ್ಟ್ರೇಲಿಯಾ ,ನ್ಯೂಜಿಲ್ಯಾಂಡ್ ,ಸೌತ್ ಆಫ್ರಿಕಾ ,ಶ್ರೀಲಂಕಾ ಹಾಗು ಭಾರತದ ಮಹಿಳಾ ತಂಡಗಳು ಭಾಗವಸಲಿದೆ.

ಕೇವಲ 14 ವಯಸ್ಸಿನ ಈಕೆ U.A.E ಯ ಅಂತಾರಾಷ್ಟ್ರೀಯ ಇಂಡೋರ್ ಕ್ರಿಕೆಟ್ ತಂಡದ ಕಿರಿಯ ಆಟಗಾರ್ತಿಯಾಗಿದ್ದು, ಕರ್ನಾಟಕ ಮೂಲದ ಆಟಗಾರ್ತಿಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಸದ್ಯ ದುಬೈ ಜೆ ಸ್ ಸ್ ಪ್ರೈವೇಟ್ ಸ್ಕೂಲ್ನಲ್ಲಿ 9 ನೇ ತರಗತಿಯಲ್ಲಿ ಓದುತ್ತಿರುವ ಅಮಿಷ ಆನಂದ್, ದುಬೈ ಯಲ್ಲಿ ನೆಲೆಸಿರುವ ಕ್ರೀಡಾ ಪ್ರೇಮಿ ಹಾಗು ಪ್ರೋತ್ಸಹಿ ಆನಂದ್ ಪಟ್ಟೆ ಮತ್ತು ವಿನುತಾ ಆನಂದ್ ದಂಪತಿಯ ಏಕೈಕ ಮಗಳು

ಸೀಸನ್(ಹಾರ್ಡ್)ಬಾಲ್ ನಲ್ಲಿ U.A.E ಕ್ರಿಕೆಟ್ ಬೋರ್ಡ್ ನ ಅಂಡರ್ 15,16 ಮತ್ತು ಅಂಡರ್ 19ರ ಹುಡಿಗಿಯರ ವಿಭಾಗದ ಹಾರ್ಡ್ ಬಾಲ್ ಕ್ರಿಕೆಟ್ ಪಂದ್ಯ ಕೂಟದಲ್ಲಿ ಅತಿಥಿ ತಂಡಗಳಾದ ಇಂಗ್ಲೆಂಡ್ ನ್ಯೂಜಿಲ್ಯಾಂಡ್ , ಅಮೇರಿಕಾ ಹಾಗು ಓಮನ್ ತಂಡಗಳೆದುರು U.A.E ಪರವಾಗಿ ಆಡಿದ ಅನುಭವ ಇದೆ.ಇಂಗ್ಲೆಂಡ್ನ ಕ್ರಿಕೆಟ್ ಆಟಗಾರ ಜೋ ರೂಟ್ ಕ್ರಿಕೆಟ್ ಅಕೆಡೆಮಿ ವತಿಯಿಂದ ನಡೆಯಲ್ಪಡುವ ರೂಟ್ ಕಪ್ ಅಂಡರ್ 16 ಹುಡುಗಿಯರ ವಿಭಾದಲ್ಲಿ ಸತತ ಎರಡನೇ ಬಾರಿ ದುಬೈ ತಂಡವನ್ನು ಪ್ರತಿನಿಧಿಸಿ , ಅತಿಥಿ ತಂಡಗಳಾದ ಇಂಗ್ಲೆಂಡ್ ನ್ಯೂಜಿಲ್ಯಾಂಡ್ ಇಂಗ್ಲೆಂಡ್ ಹಾಗು ನ್ಯೂಜಿಲ್ಯಾಂಡ್ ತಂಡಗಳನ್ನು ಸೋಲಿಸಿ UAE ತಂಡವು ರೂಟ್ ಕಪ್ ನ್ನು ಗೆದ್ದುಕೊಂಡಿತ್ತು.

ಬಹುಮುಖ ಪ್ರತಿಭೆಯಾಗಿರುವ ಈಕೆ ಕ್ರಿಕೆಟಿನೊಂದಿಗೆ ವಾಲಿಬಾಲ್ ,ಅಥ್ಲೆಟಿಕ್ ,ಈಜುಗಾರಿಕೆ . ಹಾಡುಗಾರಿಕೆ ಹಾಗು ನ್ರಿತ್ಯದಲ್ಲೂ ಮುಂಚೂಣಿಯಲ್ಲಿದ್ದಾಳೆ. U.A.Eಯ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ್ತಿ ನಿಶಾ ಆಲಿ ಗರಡಿಯಲ್ಲಿ ತರಬೇತಿ ಪಡೆಯುತಿದ್ದು , U.A.E ಯ ಮಾಜಿ ನಾಯಕಿ ಅಂತಾರಾಷ್ಟ್ರೀಯ ಕ್ರಿಕೆಟ್ ಹಾಗು ಎಮಿರೇಟ್ಸ್ ಕ್ರಿಕೆಟ್ ಬೋರ್ಡ್ನ ಅಧಿಕಾರಿಯಾಗಿರುವ ಛಾಯ ಮುದ್ದ್ಗಲ್ ಮಾರ್ಗದರ್ಶನದೊಂದಿಗೆ ಅಂತಾರಾಷ್ಟ್ರೀಯಯ ಕ್ರಿಕೆಟಿಗೆ ತಯಾರಾಗುತಿದ್ದಾಳೆ. ಬಹು ಪ್ರತಿಭೆಯ ಈ ಅಪ್ಪಟ ಕ್ರೀಡಾಳುವಿನ ಮುಂದಿನ ಕ್ರೀಡಾ ಪಯಣಕ್ಕೆ ಶುಭ ಹಾರೈಸೋಣ.


Spread the love

Exit mobile version