ಮಂಗಳೂರು|ಕೊಲೆಯತ್ನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2016ರಲ್ಲಿ ನಡೆದ ಕೊಲೆಯತ್ನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕಾವೂರು ಕೆಎಚ್‌ಬಿ ಕಾಲನಿಯ ನಿವಾಸಿ ವಿಶಾಲ್ ಕುಮಾರ್ (26) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು 2022ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿತ್ತು. ದುಬೈಗೆ ಹೋಗಿರುವ ಖಚಿತ ಮಾಹಿತಿ ಮೇರೆಗೆ ಈತನ ಮೇಲೆ ಎಲ್‌ಒಸಿ ಹೊರಡಿಸಲಾಗಿತ್ತು. ಗುರುವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಬಗ್ಗೆ ಮಾಹಿತಿ ಪಡೆದ ಇಮಿಗ್ರೇಷನ್ ಅಧಿಕಾರಿಗಳು ವಶಕ್ಕೆ ಪಡೆದು ಮುಂದಿನ ಕ್ರಮದ ಬಗ್ಗೆ ಕಾವೂರು ಪೊಲೀಸ್ ಠಾಣೆಗೆ ಒಪ್ಪಿಸಿದ್ದರು.
ಅದರಂತೆ ಶುಕ್ರವಾರ ಆರೋಪಿಯನ್ನು 3ನೇ ಹೆಚ್ಚುವರಿ ಜಿಲ್ಲಾ ಮತ್ತು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಸೆ.18ರವರೆಗೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈತನ ಮೇಲೆ ಬರ್ಕೆ ಪೊಲೀಸ್ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿದೆ.