ಮಂಗಳೂರು: ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

Spread the love

ಮಂಗಳೂರು: ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು: ಬಂಟ್ವಾಳ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಹೊಸದಾಗಿ ತುಂಬಲು ಸರಕಾರವು ನಿರ್ಧರಿಸಿದ್ದು, ಅರ್ಹ ಆಸಕ್ತರಿರುವ ವಕೀಲರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಗಳು ಜಿಲ್ಲಾಧಿಕಾರಿಯವರ ಕಛೇರಿಯ ಆಡಳಿತ ಶಾಖೆಯಲ್ಲಿ ಲಭ್ಯವಿರುತ್ತದೆ. ಅರ್ಜಿಯೊಂದಿಗೆ ಅರ್ಜಿದಾರರ ವಿದ್ಯಾರ್ಹತೆ, ಹುಟ್ಟಿದ ದಿನಾಂಕ, ಜಾತಿ, ವರ್ಗ ಮತ್ತು 7 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರುವ, ನ್ಯಾಯಾಲಯದಲ್ಲಿ ವಕಾಲತ್ತು ಮಾಡಿರುವ ಅನುಭವವುಳ್ಳ. ವಿವಿಧ ರೀತಿಯ ಕ್ಲಿಷ್ಟಕರ ಮತ್ತು ಸಂಕೀರ್ಣ ವಿಚಾರಗಳನ್ನು ಒಳಗೊಂಡ ವಿವರ, ಅವಧಿ ಮತ್ತು ಅನುಭವಗಳ ಬಗ್ಗೆ ಪುರಾವೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕಾಗಿರುತ್ತದೆ. ವಿಶೇಷ ಅರ್ಹತೆಗಳೇನಾದರೂ ಇದ್ದಲ್ಲಿ ದಾಖಲೆಗಳನ್ನು ಲಗ್ತೀಕರಿಸಬೇಕು. ಅರ್ಜಿಗಳನ್ನು ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ಸ್ವೀಕರಿಸಲು ಕೊನೆಯ ದಿನಾಂಕ ನವೆಂಬರ್ 14. ನಿಗದಿತ ಸಮಯದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.


Spread the love
Subscribe
Notify of

0 Comments
Inline Feedbacks
View all comments