ಮಂಗಳೂರು: ಇನ್ಸ್ಟಾಗ್ರಾಂ ನಲ್ಲಿ ಪ್ರಚೋದನಕಾರಿ ಸಂದೇಶ ಹಾಕಿದ ಆರೋಪಿಯ ಗುರುತು ಪತ್ತೆ
ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿಯ ಫೋಟೊ ಹಾಕಿ ವಿಎಚ್ಪಿ- ಭಜರಂಗದಳ ಅಶೋಕನಗರ ಮತ್ತು ಶಂಖನಾದ ಎಂಬ ಎರಡು ಇನ್ಸ್ಟಾಗ್ರಾಂ ಪ್ರೊಫೈಲ್ಗಳಲ್ಲಿ ಪ್ರಚೋದನಕಾರಿ ಸಂದೇಶ ಹಾಕಿದ್ದ ಆರೋಪಿಯ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಆರೋಪಿಯನ್ನು ಉಡುಪಿಯ ಅಖಿಲೇಶ್ (26) ಎಂದು ಗುರುತಿಸಲಾಗಿದೆ.
ಆರೋಪಿಯು ಸಮಾಜದ ವಿವಿಧ ಧರ್ಮ ಹಾಗೂ ವರ್ಗಗಳ ಜನರಲ್ಲಿ ದ್ವೇಷದ ಭಾವನೆ ಹುಟ್ಟುಹಾಕಿ ಅಪರಾಧ ಕೃತ್ಯ ಎಸಗುವಂತೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿ, ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ದ್ವೇಷಭಾವನೆ ಹುಟ್ಟುವಂತೆ ಪೋಸ್ಟ್ ಮಾಡಿರುವುದರ ಆಧಾರದಲ್ಲಿ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಮುಂದಿನ ತನಿಖೆಗಾಗಿ ಮಂಗಳೂರು ನಗರ ಸೆನ್ ಅಪರಾಧ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಆರೋಪಿಯ ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.