Home Mangalorean News Kannada News ಮಂಗಳೂರು: ಕಾನೂನು ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು: ಕಾನೂನು ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

Spread the love

ಮಂಗಳೂರು: ಕಾನೂನು ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು:  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯಡಿ ಸಖಿ ಒನ್ ಸ್ಟಾಪ್ ಸೆಂಟರ್ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇಲ್ಲಿ ಗುತ್ತಿಗೆ ಆಧಾರದ ಮೇಲೆ ಕಾನೂನು ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಮಾಸಿಕ 25 ಸಾವಿರ ರೂ. ಗೌರವಧನ ಆಧಾರದಲ್ಲಿ ಕಾನೂನು ವಿಷಯದಲ್ಲಿ ಪದವಿ ಹಾಗೂ ಸರಕಾರಿ/ ಸ್ವಯಂಸೇವಾ ಸಂಸ್ಥೆಯಲ್ಲಿ ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ಕನಿಷ್ಟ 3 ವರ್ಷಗಳ ಅನುಭವ ಅಥವಾ ಯಾವುದೇ ನ್ಯಾಯಾಲಯದಲ್ಲಿ ಕನಿಷ್ಠ 2 ವರ್ಷಗಳ ದಾವೆ ಅನುಭವ ಹೊಂದಿರುವ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಹ ಅಭ್ಯರ್ಥಿಗಳು ಏಪ್ರಿಲ್ 10 ರೊಳಗೆ ಸೂಕ್ತ ದಾಖಲೆಗಳೊಂದಿಗೆ ನಗರದ ಬಿಜೈ ಮೆಸ್ಕಾಂ ಬಳಿ ಇರುವ ಸ್ತ್ರೀಶಕ್ತಿಭವನದ 2 ನೇ ಮಹಡಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಛೇರಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಅವಧಿ ಮೀರಿ ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version