ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ | ಮುಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ

Spread the love

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ | ಮುಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಮಂಗಳೂರು : ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗೆ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ.

ಮುಹಮ್ಮದ್ ಶಾರಿಕ್ ಶಿಕ್ಷೆಗೊಳಗಾದ ಅಪರಾಧಿ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು.

ಈ ಘಟನೆಯಲ್ಲಿ ಶಾರಿಕ್ ಮತ್ತು ರಿಕ್ಷಾ ಚಾಲಕ ಗಾಯಗೊಂಡಿದ್ದರು. ಬಳಿಕ ದೇಶದ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಲಾಗಿತ್ತು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಎನ್‌ಐಎ ವಿಶೇಷ ನ್ಯಾಯಾಲಯವು, ಆರೋಪಿ ವಿರುದ್ಧದ ಸಾಕ್ಷ್ಯಗಳನ್ನು ಪುರಸ್ಕರಿಸಿದೆ. ಶಾರಿಕ್ ವಿರುದ್ಧ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದೆ.


Spread the love