ಮಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು: ರಾಷ್ಟ್ರೀಯ ಆಹಾರ ಭದ್ರತೆ ಮತ್ತು ಪೌಷ್ಟಿಕ ಅಭಿಯಾನ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಜಂಟಿ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸಲು ತಾಂತ್ರಿಕ ಸಹಾಯಕರು- 1 ಹುದ್ದೆ, ಸಸ್ಯ ಸಂರಕ್ಷಣೆ ಯೋಜನೆಯ ಕೃಷಿ ಸಂಜೀವಿನಿ ಕಾರ್ಯಕ್ರಮದಡಿ ಕ್ಷೇತ್ರ ಭೇಟಿ ಹಾಗೂ ಕಛೇರಿ ಕರ್ತವ್ಯ ನಿರ್ವಹಿಸಲು ಕೃಷಿ ಸಂಜೀವಿನಿ ತಾಂತ್ರಿಕ ಸಿಬ್ಬಂದಿ-1 ಹುದ್ದೆ ಹಾಗೂ ಪಿ.ಎಂ.ಕಿಸಾನ್ ಯೋಜನೆಯಡಿ ತಾಂತ್ರಿಕ ಸಹಾಯಕರು-1 ಹುದ್ದೆ, ಡಾಡಾ ಎಂಟ್ರಿ ಅಪರೇಟರ್-1 ಹುದ್ದೆ ಖಾಲಿಯಿದ್ದು, ಖಾಲಿ ಹುದ್ದೆಗೆ ತಾತ್ಕಾಲಿಕ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿಗಾಗಿ ಕೃಷಿ ಹಾಗೂ ಕೃಷಿ ಸಂಬಂಧಿತ ವಿಷಯಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಹಾಗೂ ಯಾವುದೇ ವಿಷಯದಲ್ಲಿ ಪದವಿ ಪಡೆದಿರುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳು ಹೊರಗುತ್ತಿಗೆ ಆಧಾರಿತವಾಗಿದ್ದು, ತಾತ್ಕಾಲಿಕವಾಗಿರುತ್ತದೆ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನ.
ಅರ್ಹತೆ ಹಾಗೂ ವಿದ್ಯಾರ್ಹತೆ:
- ರಾಷ್ಟ್ರೀಯ ಆಹಾರ ಭದ್ರತೆ ಮತ್ತು ಪೌಷ್ಟಿಕ ಅಭಿಯಾನ- ತಾಂತ್ರಿಕ ಸಹಾಯಕರು – 1 ಹುದ್ದೆ: ಬಿ.ಎಸ್ಸಿ. ಕೃಷಿ/ಬಿ.ಎಸ್ಸಿ ಹಾನರ್ಸ್ ಕೃಷಿ ಸ್ನಾತಕೋತ್ತರ ಪದವಿಯನ್ನು ನೋಂದಾಯಿತ ವಿಶ್ವವಿದ್ಯಾನಿಲಯದಡಿಯಲ್ಲಿ ಪಡೆದುಕೊಂಡಿರಬೇಕು ಹಾಗೂ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
- ಕೃಷಿ ಸಂಜೀವಿನಿ ತಾಂತ್ರಿಕ ಸಹಾಯಕರು – 1 ಹುದ್ದೆ : ಕೃಷಿ ಡಿಪ್ಲೋಮಾ ಹೊಂದಿರುವ ಅಥವಾ ಬಿ.ಎಸ್.ಸಿ(ಕೃಷಿ/ ತೋಟಗಾರಿಕೆ) ಪದವಿಯ ಜೊತೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
- ಪಿ.ಎಂ.ಕಿಸಾನ್ ಯೋಜನೆಯಡಿ ತಾಂತ್ರಿಕ ಸಹಾಯಕರು-1 ಹುದ್ದೆ : ಬಿ.ಎಸ್ಸಿ. ಕೃಷಿ ಪದವಿದಾರರಿಗೆ ಮೊದಲ ಆದ್ಯತೆ ಇಲ್ಲವೆ ಡಿಪ್ಲೋಮಾ (ಕೃಷಿ) ವಿದ್ಯಾರ್ಹತೆಯೊಂದಿಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
- ಪಿ.ಎಂ.ಕಿಸಾನ್ ಯೋಜನೆಯಡಿ ಡಾಟಾ ಎಂಟ್ರಿ ಅಪರೇಟರ್-1 ಹುದ್ದೆ: ಯಾವುದೇ ವಿಷಯದಲ್ಲಿ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಹೆಚ್ಚಿನ ಮಾಹಿತಿಗೆ ನಮೂನೆ ಮತ್ತು ಜಂಟಿ ಕೃಷಿ ನಿರ್ದೇಶಕರ ಕಛೇರಿಯ ದೂರವಾಣಿ ಸಂಖ್ಯೆ: 0824-2423604/ ಮೊಬೈಲ್ ಸಂಖ್ಯೆ: 9972718512, 8277141783 ಅಥವಾ ಇ ಮೇಲ್ ಐಡಿ jdagrimng@gmail.com ಗೆ ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.