ಮಂಗಳೂರು| ಕೋಮು ಪ್ರಚೋದನೆ ಆರೋಪ : ಮಹೇಶ್ ವಿಕ್ರಮ ಹೆಗ್ಡೆ ಬಂಧನ
ಮೂಡುಬಿದಿರೆ: ಕೋಮು ಪ್ರಚೋದನೆ ಆರೋಪದಲ್ಲಿ ಖಾಸಗಿ ವಾಹಿನಿ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಎಂಬಾತನನ್ನು ಮೂಡುಬಿದಿರೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೊ ಎಡಿಟ್ ಮಾಡಿ ಮುಖ್ಯಮಂತ್ರಿಗಳೇ, “ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿ ಮೇಲೆ ಬುಲ್ಡೋಜರ್ ನುಗ್ಗಿಸಿ ” ಎಂಬ ಶೀರ್ಷಿಕೆ ಇದ್ದ ಪೋಸ್ಟರ್ ಅನ್ನು ಮಹೇಶ್ ವಿಕ್ರಮ್ ಹೆಗ್ಡೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದನು.
ಎರಡು ಧರ್ಮಗಳ ನಡುವೆ ದ್ವೇಷ ಭಾವನೆ ಮೂಡಿಸಿ ಕೋಮುಗಲಭೆ ಸೃಷ್ಟಿಸುವ ಹಾಗೂ ಸಮಾಜದ ಶಾಂತಿ ಸುವ್ಯವಸ್ಥೆ ಹದಗೆಡಿಸುವ ಉದ್ದೇಶದಿಂದ ಈ ಪೋಸ್ಟ್ ನ್ನು ಹಾಕಿರುವ ಬಗ್ಗೆ ಮೂಡುಬಿದಿರೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.
ಅದರಂತೆ ಬೆಂಗಳೂರಿಗೆ ತೆರಳಿದ ಪೊಲೀಸರು ಆರೋಪಿ ಮಹೇಶ್ ವಿಕ್ರಂ ಹೆಗ್ಡೆಯನ್ನು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.