Spread the love
ಮಂಗಳೂರು| ಕ್ವಿಟ್ ಇಂಡಿಯಾ ದಿನಾಚರಣೆ: ಗೌರವಾರ್ಪಣೆ
ಮಂಗಳೂರು: ಕ್ವಿಟ್ ಇಂಡಿಯಾ ದಿನಾಚರಣೆಯ ಅಂಗವಾಗಿ ಶನಿವಾರ ಜಿಲ್ಲಾಡಳಿತ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿ ಅವರಿಗೆ ಗೌರವ ಸಲ್ಲಿಸಲಾಯಿತು.
ನಗರದ ಕುದ್ರೋಳಿ ಅಳಕೆಯಲ್ಲಿರುವ ವಿಠಲ ಕಿಣಿ ಅವರ ಮನೆಗೆ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಮತ್ತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಭೇಟಿ ನೀಡಿ ಸನ್ಮಾನಿಸಿ, ಗೌರವಿಸಿದರು.
ವಿಠಲ ಕಿಣಿ ಅವರೊಂದಿಗೆ ಸಮಾಲೋಚಿಸಿದ ಅವರು, ಸ್ವಾತಂತ್ರ್ಯ ಹೋರಾಟದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ತಹಶೀಲ್ದಾರ್ ರಮೇಶ್ ಬಾಬು, ಕಸಬಾ ಕಂದಾಯ ನಿರೀಕ್ಷಕ ಚೇತನ್ ಮತ್ತಿತರರು ಇದ್ದರು.
Spread the love