Spread the love
ಮಂಗಳೂರು: ಗುರುಪುರ ನದಿಗೆ ಹಾರಿ ಯುವತಿ ಆತ್ಮಹತ್ಯೆ
ಮಂಗಳೂರು: ಗುರುಪುರ ನದಿಗೆ ಹಾರಿ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸ್ಕೂಟರ್‌ನಲ್ಲಿ ಬಂದ ಯುವತಿ, ಸೇತುವೆಯ ಮೇಲೆ ವಾಹನವನ್ನು ನಿಲ್ಲಿಸಿ ಬಳಿಕ ನದಿಗೆ ಜಿಗಿದಿರುವುದು ದೃಢಪಟ್ಟಿದೆ.
ಮೃತ ಯುವತಿಯನ್ನು ಮೂಡಬಿದ್ರೆ ಅಲಂಗಾರು ಜ್ಯುವೆಲರ್ ಅಂಗಡಿಯಲ್ಲಿ ಸಿಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನವ್ಯ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಯುವತಿಯ ಆತ್ಮಹತ್ಯೆಗೆ ಕಾರಣ ಪತ್ತೆ ಹಚ್ಚುವ ನಿಟ್ಟಿನಲ್ಲಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Spread the love













