ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ
ಮಂಗಳೂರು: ನಗರದ ಕೊಡಿಯಾಲ್ ಬೈಲ್ ನ್ಲಲಿರುವ ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದಿರುವ ಬಗ್ಗೆ ವರದಿಯಾಗಿದೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳು ಮತ್ತು ಮತ್ತೊಂದು ಗ್ಯಾಂಗ್ ನಡುವೆ ಹೊಡೆದಾಟ ನಡೆದಿದ್ದು ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನೌಷದ್ ಮೇಲೆ ಇನ್ನೊಂದು ಗುಂಪಿನ ಕೈದಿಗಳು ದಾಳಿ ನಡೆಸಿರುವುದಾಗಿ ವರದಿಯಾಗಿದೆ
ಸೋಮವಾರ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ನೌಷಾದ್ ನ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, ಕೋರ್ಟ್ ಗೆ ಚೊಟ್ಟೆ ನೌಷಾದ್ ನನ್ನು ಪೊಲೀಸರು ಹಾಜರುಪಡಿಸಿದ್ದರು. ಬಳಿಕ ಮೈಸೂರು ಜೈಲಿಗೆ ಸ್ಥಳಾಂತರ ಮಾಡಲು ಪೊಲೀಸರು ನಿರ್ಧರಿಸಿದ್ದು ಈ ಮಧ್ಯೆ ಮಂಗಳೂರು ಜೈಲಿನಲ್ಲಿ ಯಾರನ್ನೊ ನೋಡಬೇಕು ಎಂದು ನೌಷಾದ್ ಹೇಳಿದ್ದ ಎನ್ನಲಾಗಿದೆ. ಜೈಲಿನಲ್ಲಿ ಮತ್ತೋರ್ವ ಖೈದಿ ಭೇಟಿಗಾಗಿ ನೌಷಾದ್ ನನ್ನು ಪೊಲೀಸರು ಕರೆದುಕೊಂಡು ಹೋಗಿದ್ದ ವೇಳೆ ಇದ್ದಕಿದ್ದಂತೆ ನೌಷಾದ್ ಮೇಲೆ ಕಲ್ಲು ಹಾಗೂ ಸಿಕ್ಕ ಸಿಕ್ಕ ವಸ್ತುಗಳನ್ನ ಎಸೆದು ಹಲ್ಲೆಗೆ ಯತ್ನ ನಡೆದಿದೆ.
ಕೂಡಲೇ ಜೈಲು ಸಿಬಂದಿಗಳು ದಾಳಿಯನ್ನು ತಪ್ಪಿಸಿದ್ದು ಅದೃಷ್ಟವಶಾತ್ ಯಾವುದೇ ತೊಂದರೆಯಾಗದೆ ನೌಷಾದ್ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.