ಮಂಗಳೂರು: ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯ ಬಂಧನ
ಮಂಗಳೂರು: ಕೊಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೊಹಮ್ಮದ್ ಮುಸ್ತಫಾ @ ಮುಸ್ತಾ ಎಂದು ಗುರುತಿಸಲಾಗಿದೆ
ದಿನಾಂಕ 05-06-2020 ರಂದು ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಲ್ಕಿ ವಿಜಯ ಸನ್ನಿದಿ ಹೆದ್ದಾರಿ ಬಳಿ ಹಾಡುಹಗಲಿನಲ್ಲಿ ರಸ್ತೆಯಲ್ಲಿ ಅಬ್ದುಲ್ ಲತೀಫ್ ಎಂಬವನನ್ನು ಆರೋಪಿಗಳಾದ ದಾವೂದ್ ಹಕೀಂ, ಮೊಹಮ್ಮದ್ ಮುಸ್ತಾಫ ಮತ್ತು ಇತರರು ಒಟ್ಟು 10 ಜನ ಸೇರಿ ಕೊಲೆ ಮಾಡಿದ್ದು, ಎಲ್ಲಾ ಆರೋಪಿಗಳ ವಿರುದ್ದ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿರುತ್ತದೆ. ಹಾಲಿ ನ್ಯಾಯಾಲಯದ ವಿಚಾರಣಾ ಹಂತದಲ್ಲಿರುತ್ತದೆ.
ಆರೋಪಿ ಮೊಹಮ್ಮದ್ ಮುಸ್ತಫಾ @ ಮುಸ್ತಾ, ಉಚ್ಚ ನ್ಯಾಯಾಲಯದಲ್ಲಿ ದಿನಾಂಕ 19-10-2020 ರಂದು ಜಾಮೀನು ಪಡೆದಿದ್ದು, ನಂತರ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ದಿನಾಂಕ 22-04-2022 ರಂದು ಜಾಮೀನು ರದ್ದು ಮಾಡಿರುತ್ತದೆ. ಅಂದಿನಿಂದಲೂ ಆರೋಪಿ ಮೊಹಮ್ಮದ್ ಮುಸ್ತಫಾನು ತಲೆಮರೆಸಿಕೊಂಡು ನಕಲಿ ಪಾಸ್ಪೋರ್ಟ್ ಮೂಲಕ ವಿದೇಶಕ್ಕೆ ಪರಾರಿಯಾಗಿದ್ದನು.
ತಲೆಮರೆಸಿಕೊಂಡ ವಾರಂಟು ಅಸಾಮಿ ಮೊಹಮ್ಮದ್ ಮುಸ್ತಫಾ @ ಮುಸ್ತಾ ಎಂಬಾತನ ಪತ್ತಗೆ ವಿಶೇಷ ತಂಡವನ್ನು ರಚಿಸಲಾಗಿದ್ದು, ದಿನಾಂಕ 30-06-2025 ರಂದು ಮುಲ್ಕಿಯ ಪಕ್ಷಿಕೆರೆ ಬಳಿ ಪತ್ತೆ ಮಾಡಿ ಮುಂದಿನ ಕ್ರಮದ ಬಗ್ಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಈತನ ವಿಚಾರಣೆಯಲ್ಲಿ ಈತನು ನಕಲಿ ಪಾಸ್ಪೋರ್ಟ್ನ್ನು ಪಡೆದು ಓಮನ್ ರಾಷ್ಟ್ರಕ್ಕೆ ಪರಾರಿಯಾಗಿ ನಂತರ ನೇಪಾಳ ಮೂಲಕ ಭಾರತ ದೇಶಕ್ಕೆ ಬಂದಿರುವುದಾಗಿ ತಿಳಿದಿರುತ್ತದೆ.
ಇತನು ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಈತನ ವಿರುದ್ದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬಗ್ಗೆ ಮತ್ತು ವಿದೇಶ ಮತ್ತು ಭಾರತಕ್ಕೆ ಅಕ್ರಮವಾಗಿ ಪ್ರವೇಶ ಮಾಡಿರುವ ಪ್ರಕರಣವನ್ನು ಮುಲ್ಕಿ ಠಾಣೆಯಲ್ಲಿ ದಾಖಲಿಸಿ ಕೊಂಡಿರುತ್ತೆ. ನಕಲಿ ಪಾಸ್ಪೋರ್ಟ್ ಹೊಂದಿರುವ ಬಗ್ಗೆ ಬೆಂಗಳೂರಿನ ಬಸನಗುಡಿ ಪೊಲೀಸ್ ಠಾಣೆಯ ಪ್ರಕರಣ ದಾಖಲಾಗಿರುತ್ತದೆ. ಈತನ ಮೇಲೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ 4 ಮತ್ತು ಇತರೆ ಜಿಲ್ಲೆಯಲ್ಲಿ ಒಟ್ಟು 5 ಪ್ರಕರಣಗಳಲ್ಲಿ ಬಾಗಿಯಾಗಿದ್ದಾನೆ. ಚಿಕ್ಕಮಗಳೂರು, ಉಡುಪಿ ಜಿಲ್ಲೆಯ ಠಾಣೆಗಳಲ್ಲಿ ಈತನ ವಿರುದ್ದ ಎರಡು ಪ್ರಕರಣಗಳಲ್ಲಿ ವಾರಂಟು ಬಾಕಿ ಇರುತ್ತದೆ.