ಮಂಗಳೂರು ನಗರಕ್ಕೆ ಮಾದಕ ವಸ್ತುಗಳನ್ನು ಪೊರೈಕೆ ಮಾಡುತ್ತಿದ್ದವನ ಬಂಧನ
ಮಂಗಳೂರು: ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕ ವಸ್ತುವನ್ನು ಪಡೆದುಕೊಂಡು ಮಂಗಳೂರು ನಗರಕ್ಕೆ ಪೂರೈಕೆ ಮಾಡುತ್ತಿದ್ದ ಆರೋಪಿಯನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಬೆಂಗಳೂರು ಕೆಂಗೇರಿ ನಿವಾಸಿ ಪ್ರಜ್ವಲ್ ಪೀಣ್ಯಾಸ್ ಎಂದು ಗುರುತಿಸಲಾಗಿದೆ.
ದಿನಾಂಕ: 02-07-2025 ರಂದು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 31/2025 ಕಲಂ. 8(c),20(b)(ii)(B) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ವರದಿಯಾಗಿರುತ್ತದೆ.
ಸದ್ರಿ ಪ್ರಕರಣದಲ್ಲಿ ಮಾದಕ ವಸ್ತು ಸೇವನೆ ಮಾಡುವವರಿಂದ ತನಿಖೆ ಆರಂಭಿಸಿ ಹಂತ ಹಂತವಾಗಿ ಮಾದಕ ವಸ್ತುಗಳನ್ನು ಮಂಗಳೂರು ನಗರದಲ್ಲಿ ಪೂರೈಕೆ ಮಾಡುವ 09 ಜನರನ್ನು ಪತ್ತೆ ಮಾಡಿ ಈಗಾಗಲೇ ದಸ್ತಗಿರಿ ಕ್ರಮ ಕೈಗೊಂಡು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿರುತ್ತದೆ.
ಪ್ರಕರಣ ತನಿಖೆಯ ವೇಳೆ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕ ವಸ್ತುವನ್ನು ಪಡೆದುಕೊಂಡು ಮಂಗಳೂರು ನಗರಕ್ಕೆ ಪೂರೈಕೆ ಮಾಡುತ್ತಿದ್ದವರ ಪೈಕಿ ಪ್ರಮುಖ ಆರೋಪಿತನನ್ನು ಪತ್ತೆ ಮಾಡಿ ದಸ್ತಗಿರಿ ಕ್ರಮ ಕೈಗೊಂಡು ದಿನಾಂಕ: 10-07-2025 ರಂದು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದ್ದೆ, ಆರೋಪಿತನು ಕೃತ್ಯಕ್ಕೆ ಬಳಸಿದ 01ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿದೆ.
ಸದ್ರಿ ಪ್ರಕರಣದ ಆರೋಪಿತನು ಈ ಹಿಂದೆ ನಗರದ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡಿದ್ದು, ಆರೋಪಿತನ ವಿರುದ್ಧ ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ 03 ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿರುತ್ತವೆ.