ಮಂಗಳೂರು ನಗರ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಉಸ್ತುವಾರಿಯಾಗಿ ರಮಾನಂದ ಪೂಜಾರಿ

Spread the love

ಮಂಗಳೂರು ನಗರ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಉಸ್ತುವಾರಿಯಾಗಿ ರಮಾನಂದ ಪೂಜಾರಿ

ಮಂಗಳೂರು: ಲೋಕಸಭಾ ಚುನಾವಣೆಗೆ ಮಂಗಳೂರು ನಗರ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಪ್ರಚಾರ ಸಮಿತಿ ಉಸ್ತುವಾರಿಯನ್ನಾಗಿ ಯುವ ಮುಖಂಡ ರಮಾನಂದ ಪೂಜಾರಿ ಅವರನ್ನು ನೇಮಿಸಿ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಹಾಗೂ ದ.ಕ. ಜಿಲ್ಲಾ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಬಿ.ರಮಾನಾಥ ರೈ ಆದೇಶಿಸಿದ್ದಾರೆ.

ರಮಾನಂದ ಪೂಜಾರಿ ಅವರು ಈ ಹಿಂದೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರಸ್ತುವ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.


Spread the love