Spread the love
ಮಂಗಳೂರು ನಗರ ಪೊಲೀಸ್ ಕಮಿಷನರ್, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ವರ್ಗಾವಣೆ
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯತೀಶ್ ಎನ್. ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಅನುಮಪ್ ಅಗರ್ವಾಲ್ ಸ್ಥಾನಕ್ಕೆ ಗುಪ್ತಚರ ಇಲಾಖೆಯಲ್ಲಿ ಡಿಐಜಿ ಆಗಿರುವ ಸುಧೀರ್ ಕುಮಾರ್ ರೆಡ್ಡಿಯವನ್ನು ನೇಮಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಉಡುಪಿಯಲ್ಲಿ ದಕ್ಷ ಎಸ್ಪಿ ಎಂದು ಹೆಸರು ಮಾಡಿರುವ ಡಾ. ಅರುಣ್ ಕುಮಾರ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಅನುಪಮ್ ಅಗರ್ವಾಲ್ ಅವರನ್ನು ಎಕಾನಾಮಿಕ್ ಅಫೆನ್ಸ್ ಮತ್ತು ಕ್ರಿಮಿನಲ್ ಇನ್ವೆಸ್ಟಿಗೇಶನ್ ವಿಭಾಗಕ್ಕೆ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ
Spread the love