ಮಂಗಳೂರು ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

Spread the love

ಮಂಗಳೂರು ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

ಮಂಗಳೂರು: ಮಂಗಳೂರು ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣಗೊಂಡಿತು.

ಅಪರಿಚಿತ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವುದಾಗಿ ತಿಳಿದುಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಬಾಂಬ್ ಪತ್ತೆದಳ ಸ್ಥಳಕ್ಕೆ ಧಾವಿಸಿ ಪರಿಶೀಲನೆ ಆರಂಭಿಸಿದರು.

ನ್ಯಾಯಾಲಯ ಆವರಣದಲ್ಲಿ ಬಾಂಬ್ ಪತ್ತೆದಳ ಹಾಗೂ ಪೊಲೀಸ್ ತಂಡದಿಂದ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ತನಿಖೆ ಮುಂದುವರಿದಿದೆ.


Spread the love
Subscribe
Notify of

0 Comments
Inline Feedbacks
View all comments