ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Spread the love

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಕುಂಬಳೆಯ ಹನೀಫ್ ಯಾನೆ ಅಬ್ದುಲ್ ಹನೀಫ್ ಬಂಧಿತ ಆರೋಪಿ.

ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ವಿರುದ್ಧ 6ನೇ ಜೆಎಂಎಫ್‌ಸಿ ನ್ಯಾಯಾಲಯವು ಕಳೆದ ಒಂದು ವರ್ಷದಿಂದ 9 ಬಾರಿ ವಾರೆಂಟ್ ಹೊರಡಿತ್ತು. ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಬಗ್ಗೆ ಕಲಂ 269 ಬಿಎನ್‌ಎಸ್ 2023ರಂತೆ ಈತನ ಪತ್ತೆಗಾಗಿ ಪ್ರಯತ್ನವನ್ನು ಮುಂದುವರಿಸಿದ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ವಾರೆಂಟ್ ಸಿಬ್ಬಂದಿ ಎಎಸ್‌ಐ ಮಚೇಂದ್ರನಾಥ್ ಜೋಗಿ ಮತ್ತು ಎಚ್‌ಸಿ ನಾರಪ್ಪ ಕೆಬಿ ಅವರು ಆರೋಪಿಯನ್ನು ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 4 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ.


Spread the love
Subscribe
Notify of

0 Comments
Inline Feedbacks
View all comments