ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Spread the love

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಮಂಗಳೂರು ನಗರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಮಂಜೇಶ್ವರ ತಾಲೂಕು ಉಪ್ಪಳದ ಅಬ್ದುಲ್ ರವೂಫ್ ಅಲಿಯಾಸ್ ಮೀಸೆ ರವೂಫ್ ( 48 ) ಬಂಧಿತ ಆರೋಪಿ

ಈತನ ವಿರುದ್ಧ ಕೇರಳದ ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 19 ಪ್ರಕರಣಗಳು ದಾಖಲಾಗಿರುತ್ತದೆ ಮತ್ತು ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಹಾಗೂ ಕೋಣಾಜೆ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳು ಸೇರಿ ಒಟ್ಟು 25 ಪ್ರಕರಣಗಳು ದಾಖಲಾಗಿದ್ದು, ಕಾವೂರು ಠಾಣಾ ಪ್ರಕರಣದಲ್ಲಿ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿತ್ತು. ಕೋಣಾಜೆ ಠಾಣಾ 5 ಪ್ರಕರಣಗಳಲ್ಲಿ ಉದ್ಘೋಷಿತ ಅಪರಾಧಿ ಎಂದು ನ್ಯಾಯಾಲಯವು ಘೋಷಿಸಿದೆ.

ಮಂಜೇಶ್ವರ ಪೊಲೀಸ್ ಠಾಣಾ ಒಂದು ಪ್ರಕರಣದಲ್ಲಿ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿರುತ್ತದೆ.

ಬಂಧಿತ ಆರೋಪಿ ಅಬ್ದುಲ್ ರವೂಫ್ ಅಲಿಯಾಸ್ ಮೀಸೆ ರವೂಫ್‌ನು ಅಂತರ್‌ರಾಜ್ಯ ನಟೋರಿಯಸ್ ಕ್ರಿಮಿನಲ್ ಕೇರಳ ರಾಜ್ಯದ ಉಪ್ಪಳ ಪೈವಳಿಕೆಯ ಇಸುಬು ಜಿಯಾದ್ ಅಲಿಯಾಸ್ ಜಿಯಾ ಎಂಬಾತನ ಸಹಚರ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಆರೋಪಿಯನ್ನು ಉತ್ತರ ಉಪ ವಿಭಾಗದ ಎಸಿಪಿ ಶ್ರೀಕಾಂತ. ಕೆ. ಮಾರ್ಗದರ್ಶನದಲ್ಲಿ ಎಎಸ್‌ಐ ಚಂದ್ರಶೇಖರ್, ಸಿಬ್ಬಂದಿ ಹೆಚ್.ಸಿ .ರೆಜಿ ವಿ.ಎಂ , ದಾಮೋದರ.ಕೆ ಮತ್ತು ಹಾಲೇಶ್ ನಾಯ್ಕ್ ನೇತೃತ್ವದ ಪೊಲೀಸರ ತಂಡ ಡಿ.16ರಂದು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments