ಮಂಗಳೂರು : ಪ್ರಯಾಣದ ಸಮಯದಲ್ಲಿ ಮಾಸ್ಕ್ ಕಡ್ಡಾಯ – ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ

Spread the love

ಮಂಗಳೂರು : ಪ್ರಯಾಣದ ಸಮಯದಲ್ಲಿ ಮಾಸ್ಕ್ ಕಡ್ಡಾಯ – ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಗೆ ಸಂಬಂಧಿಸಿ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಕೆಲಸದ ಸ್ಥಳಗಳಲ್ಲಿ ಮತ್ತು ಪ್ರಯಾಣದ ಸಮಯದಲ್ಲಿ ಮುಖದ ಹೊದಿಕೆಯನ್ನು ಧರಿಸುವುದು ಕಡ್ಡಾಯವಾಗಿದೆ. ಸರಿಯಾದ ಕ್ರಮದಲ್ಲಿ ಮುಖದ ಹೊದಿಕೆಯನ್ನು ಧರಿಸುದಿದ್ದಲ್ಲಿ ಮಹಾನಗರ ಪಾಲಿಕೆ ಪ್ರದೇಶಗಳಲ್ಲಿ ರೂ.250 ಮತ್ತು ಇನ್ನುಳಿದ ಪ್ರದೇಶಗಳಲ್ಲಿ ರೂ.100 ದಂಡ ವಿಧಿಸಲಾಗುತ್ತದೆ.

ಮೇಲ್ಕಂಡ ನಿರ್ದೇಶವನ್ನು ಪಾಲಿಸದೆ ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂತರವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗ ಅಧ್ಯಾದೇಶ 2020 ಕಲಂ 2 (3), 6(1) (2) ರನ್ವಯ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 57 ರನ್ವಯ ಕಾನೂನು ರೀತ್ಯಾ ಜರಗಿಸಲು ಆದೇಶಿಸಿದೆ. ಸಂಬಂಧಪಟ್ಟ ಅಧಿಕಾರಿಗಳು ಉಲ್ಲೇಖ (2)ರ ಸರ್ಕಾರದ ಮಾರ್ಗಸೂಚಿಗಳೊಂದಿಗೆ ಮೇರೆಗೆ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.


Spread the love