
ಮಂಗಳೂರು: ಫ್ಲ್ಯಾಟ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರ ಸಹಿತಿ ಮೂವರು ಬಂಧನ
ಮಂಗಳೂರು: ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ ನ ಆಪಾರ್ಟ್ ಮೆಂಟ್ ವೊಂದರ ಫ್ಲಾಟ್ ವೊಂದರಲ್ಲಿ ಗ್ರಾಹಕರಿಗೆ ವೇಶ್ಯಾವಾಟಿಕೆ ದಂಧೆಗೆ ಯುವತಿಯರನ್ನು/ಮಹಿಳೆಯರನ್ನು ಒದಗಿಸುತ್ತಿದ್ದ ಸ್ಥಳಕ್ಕೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಪಿಂಪ್ ಗಳನ್ನು ವಶಕ್ಕೆ ಪಡೆದುಕೊಂಡು 4 ಮಂದಿ ನೊಂದ ಯುವತಿಯರನ್ನು ರಕ್ಷಿಸಿದ್ದಾರೆ.
ಬಂಧಿತರನ್ನು ಬಂಟ್ವಾಲ ವಿಟ್ಲ ಪಡ್ನೂರು ನಿವಾಸಿ ಕೆ.ಪಿ. ಹಮೀದ್ (54), ಮಂಗಳೂರು ಆಕಾಶ ಭವನ ನಿವಾಸಿ ಅನುಪಮ ಶೆಟ್ಟಿ (46) ಮತ್ತು ಕಡಬ ನಿವಾಸಿ ನಿಶ್ಮಿತ (23) ಎಂದು ಗುರುತಿಸಲಾಗಿದೆ.
ಮಾರ್ಚ್ 1 ರಂದು ಮಂಗಳೂರು ನಗರದ ಪೂರ್ವ (ಕದ್ರಿ) ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ 3 ನೇ ಕ್ರಾಸ್ ರಸ್ತೆಯಲ್ಲಿರುವ PEEBI ರೆಸಿಡೆನ್ಸಿ ಎಂಬ ಆಪಾರ್ಟ್ ಮೆಂಟ್ ನ 2 ನೇ ಮಹಡಿಯ 201 ನೇ ಫ್ಲಾಟ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ರವರ ನೇತ್ರತ್ವದ ತಂಡ ದಾಳಿ ನಡೆಸಿ ಅಕ್ರಮವಾಗಿ ಲಾಭ ಗಳಿಸುವ ಉದ್ದೇಶದಿಂದ ಹುಡುಗಿಯರನ್ನು ತರಿಸಿಕೊಂಡು ಅನೈತಿಕ ಚಟುವಟಿಕೆ ದಂಧೆಯನ್ನು ನಡೆಸುತ್ತಿದ್ದ ದಲ್ಲಾಳಿ (ಪಿಂಪ್) ಗಳನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ 5 ಮೊಬೈಲ್ ಫೋನುಗಳು ಹಾಗೂ 50,000/- ನಗದು, ಮಾರುತಿ 800 ಕಾರನ್ನು ವಶಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಿಲಾಗಿರುತ್ತದೆ. ಅಲ್ಲದೇ 4 ಮಂದಿ ನೊಂದ ಯುವತಿ/ಮಹಿಳೆಯರನ್ನು ರಕ್ಷಿಸಲಾಗಿರುತ್ತದೆ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪೊಲೀಸ್ ಕಮೀಷನರ್ ಶ್ರೀ ಶಶಿಕುಮಾರ್ ಎನ್, ಐ.ಪಿ.ಎಸ್ ಕಾನೂನು & ಸುವ್ಯವಸ್ಥೆ ವಿಭಾಗದ ಡಿಸಿಪಿ ಯವರಾದ ಶ್ರೀ ಹರಿರಾಂ ಶಂಕರ್, ಐ ಪಿ ಎಸ್, ಅಪರಾಧ & ಸಂಚಾರ ವಿಭಾಗದ ಡಿಸಿಪಿ ಶ್ರೀ ದಿನೇಶ್ ಕುಮಾರ್ ರವರ ಮಾರ್ಗದರ್ಶನದಲ್ಲಿ, ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐ ರವರಾದ ರಾಜೇಂದ್ರ ಬಿ, ಪ್ರದೀಪ ಟಿ ಆರ್ ರವರು ಹಾಗೂ ಸಿಸಿಬಿ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೋಂಡಿರುತ್ತಾರೆ.
ವೇಶ್ಯಾ ದಂಧೆಗೆ ತೊಡಗಿಸಿಕೊಂಡವರು ನೊಂದ ಮಹಿಳೆ ಹೇಗಾಗುತ್ತಾರೆ?
ಅಲ್ಲಿ ನಡೆದಿರೋದು ಅತ್ಯಾಚಾರವೆ? ಅಥವಾ ಅದೊಂದು ಬಿಸಿನೆಸ್ಸೊ?