Home Mangalorean News Kannada News ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆ, ದಂಡ

ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆ, ದಂಡ

Spread the love

ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆ, ದಂಡ

ಮಂಗಳೂರು: ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ 16 ವರ್ಷ ಪ್ರಾಯದ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪಿ ಸಜಿಪ ನಡು ಗ್ರಾಮದ ಬಸ್ತಿಗುಡ್ಡೆ ಮನೆಯ ಮನ್ಸೂರ್ ಯಾನೆ ಮುಹಮ್ಮದ್ ಮನ್ಸೂರ್ ಯಾನೆ ಜಾಬೀರ್ ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ-2 (ಪೊಕ್ಸೊ)ವು 20 ವರ್ಷಗಳ ಕಠಿಣ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದೆ. ಅಲ್ಲದೆ ಕಲಂ 506 ಐ.ಪಿ.ಸಿ ಪ್ರಕರಣದಲ್ಲಿ ಆರೋಪಿಗೆ 5,000 ರೂ.ದಂಡ ಮತ್ತು 1 ವರ್ಷ ಶಿಕ್ಷೆಯನ್ನು ವಿಧಿಸಿದೆ.

2023ರ ಮೇ 30ರಂದು ಬಾಲಕಿಯನ್ನು ಆರೋಪಿಯು ಬೆದರಿಸಿ ಅತ್ಯಾಚಾರಗೈದು ವಿಡಿಯೋ ಮಾಡಿದ್ದ. ಈ ಬಗ್ಗೆ ಬಾಲಕಿ ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ 2023ರ ಡಿಸೆಂಬರ್ 23ರಂದು ಪ್ರಕರಣ ದಾಖಲಾಗಿತ್ತು.

ಬಾಲಕಿ ದೂರು ನೀಡಿದೊಡನೆ ಆರೋಪಿಯು 8 ತಿಂಗಳ ಕಾಲ ತಲೆಮರೆಸಿಕೊಂಡಿದ್ದ. 2024ರ ಜುಲೈ 2ರಂದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಇನ್‌ಸ್ಪೆಕ್ಟರ್ ಗುರುರಾಜ್ ಭಾಗಶಃ ತನಿಖೆ ಪೂರ್ಣಗೊಳಿಸಿದ್ದು, ಮುಂದಿನ ತನಿಖೆಯನ್ನು ಇನ್‌ಸ್ಪೆಕ್ಟರ್ ರಾಜೆಂದ್ರ ಬಿ. ನಡೆಸಿ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಧೀಶ ಮಾನು ಕೆ.ಎಸ್. ಅವರು ಬುಧವಾರ ಆರೋಪಿಗೆ ಅತ್ಯಾಚಾರದ ಆರೋಪದಡಿ 20 ವರ್ಷಗಳ ಕಾಲ ಕಠಿಣ ಶಿಕ್ಷೆ ಮತ್ತು 50 ಸಾವಿರ ರೂ. ಹಾಗೂ ಬೆದರಿಸಿದ್ದಕ್ಕಾಗಿ 5,000 ರೂ.ದಂಡ ಮತ್ತು 1 ವರ್ಷ ಶಿಕ್ಷೆಯನ್ನು ವಿಧಿಸಿದ್ದಾರೆ. ಸರಕಾರ ಪರವಾಗಿ ಅಭಿಯೋಜಕ ಬದ್ರಿನಾಥ ಮತ್ತು ವಿಶೇಷ ಅಭಿಯೋಜಕಿ ಸಹನಾದೇವಿ ಬೋಳೂರು ವಾದಿಸಿದ್ದರು.


Spread the love

Exit mobile version