ಮಂಗಳೂರು| ಬಾಲಕಿಯ ಅಪಹರಣ ಪ್ರಕರಣ: ಪ್ರಮುಖ ಆರೋಪಿ ಸಹಿತ ದಂಪತಿ ಸೆರೆ

Spread the love

ಮಂಗಳೂರು| ಬಾಲಕಿಯ ಅಪಹರಣ ಪ್ರಕರಣ: ಪ್ರಮುಖ ಆರೋಪಿ ಸಹಿತ ದಂಪತಿ ಸೆರೆ

ಉಳ್ಳಾಲ: ಬಾಲಕಿಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿ ಮತ್ತು ಆತನಿಗೆ ಸಹಕರಿಸಿದ ಆರೋಪದಲ್ಲಿ ದಂಪತಿಯನ್ನು ಬಂಧಿಸಿದ್ದಾರೆ.

16 ವಯಸ್ಸಿನ ಮಗಳು ಮನೆಯಿಂದ ಹೊರ ಹೋದವಳು ನಂತನ ನಾಪತ್ತೆಯಾಗಿದ್ದು, ಆಕೆಯನ್ನು ಅಪಹರಿಸಿರುವುದಾಗಿ ಬಾಲಕಿಯ ತಂದೆ ಉಳ್ಳಾಲ ಠಾಣೆಗೆ ದೂರು ನೀಡಿದ್ದರು.

ಈ ಬಗ್ಗೆ ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿಯನ್ನು ಅಪಹರಿಸಿದ ಆರೋಪಿ ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಶಹಬಾಝ್ (27) ಹಾಗೂ ಆತನಿಗೆ ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್ ಸೊಹೈಲ್, ನಿಶಾ ದಂಪತಿಯನ್ನು ಬಂಧಿಸಿದ್ದಾರೆ.

ಜುಲೈ 5 ರಂದು ಸಂಜೆ 4 ಗಂಟೆಗೆ ಉಳ್ಳಾಲ ಠಾಣಾ ವ್ಯಾಪ್ತಿಯ ಬಾಡಿಗೆಯ ಮನೆಯಲ್ಲಿ ನೆಲೆಸಿದ್ದ‌ ಬಾಲಕಿ ಮನೆಯಿಂದ ಹೊರ ಹೋದವಳು ಹಿಂತಿರುಗಿರಲಿಲ್ಲ. ಈ ಬಗ್ಗೆ ಬಾಲಕಿಯ ತಂದೆ ಉಳ್ಳಾಲ ಠಾಣೆಯಲ್ಲಿ ದೂರು ನೀಡಿದ್ದರು.

ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿ ಮತ್ತು ಆಕೆಯನ್ನು ಅಪಹರಿಸಿದ್ದ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಆರೋಪಿಗಳನ್ನು ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments