ಮಂಗಳೂರು| ಬ್ರಾಹ್ಮಣರಿಗೆ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ 

Spread the love

ಮಂಗಳೂರು| ಬ್ರಾಹ್ಮಣರಿಗೆ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ 

ಮಂಗಳೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯಡಿ 2025-26 ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ನೇರವಾಗಿ ಸಾಲ- ಸಹಾಯಧನ ಮಂಜೂರು ಮಾಡಲು ಉದ್ದೇಶಿಸಿದೆ. ಹಸು ಸಾಕಾಣಿಕೆ, ಗುಡಿಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಕನಿಷ್ಠ ರೂ.1 ಲಕ್ಷ ಹಾಗೂ ಗರಿಷ್ಠ ರೂ.2 ಲಕ್ಷಗಳ ಆರ್ಥಿಕ ನೆರವು ಒದಗಿಸಲಾಗುತ್ತದೆ.

  1. ಘಟಕ ವೆಚ್ಚ – ರೂ.1 ಲಕ್ಷ, ಸಹಾಯಧನ- ರೂ.20 ಸಾವಿರ, ಉಳಿಕೆ ಸಾಲದ ಮೊತ್ತ ರೂ.80 ಸಾವಿರ ವಾರ್ಷಿಕ ಬಡ್ಡಿ ದರ 4%.
  2. ಘಟಕ ವೆಚ್ಚ – ರೂ.2 ಲಕ್ಷ, ಸಹಾಯಧನ- ರೂ.40 ಸಾವಿರ, ಉಳಿಕೆ ಸಾಲದ ಮೊತ್ತ 1,60,000 ವಾರ್ಷಿಕ ಬಡ್ಡಿ ದರ 4%.

ಸಾಮಾನ್ಯ ಅರ್ಹತೆಗಳು:- ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಜಿದಾರರು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ (ಇWS ಪ್ರಮಾಣ ಪತ್ರ) ಹೊಂದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 65 ವರ್ಷದ ಒಳಗಿನವರಾಗಿರಬೇಕು. ಒಂದು ಕುಟುಂಬದಿಂದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದು. ಮಹಿಳೆಯರಿಗೆ 33%, ವಿಶೇಷಚೇತನರಿಗೆ ಶೇ 5% ಮೀಸಲಾತಿಯನ್ನು ನೀಡಲಾಗುತ್ತದೆ. ಅರ್ಜಿದಾರರ ಆಧಾರ್‍ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು ಮತ್ತು ಬ್ಯಾಂಕ್ ಖಾತೆ ಸೀಡ್ ಆಗಿರಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ.

ಹೆಚ್ಚಿನ ಮಾಹಿತಿಗೆ ಸಹಾಯವಾಣಿ 8762249230 ಸಂಪರ್ಕಿಸಬಹುದು. ವೆಬ್‍ಸೈಟ್  ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments