ಮಂಗಳೂರು: ಭಾರೀ ಮಳೆಗೆ ತಡೆಗೋಡೆ ಕುಸಿತ – 5 ಕಾರುಗಳಿಗೆ ಹಾನಿ
ಮಂಗಳೂರು: ಬುಧವಾರ ಬೆಳಿಗ್ಗೆ ಸುರಿದ ಭಾರೀ ಮಳೆಯಿಂದಾಗಿ ನಗರದ ಅತ್ತಾವರ ಸಮೀಪದ ಅಯ್ಯಪ್ಪ ಮಂದಿರದ ಮುಂಭಾಗ ತಡೆಗೋಡೆ ಕುಸಿದು ಬಿದ್ದ ಪರಿಣಾಮ ಐದು ಕಾರುಗಳು ಜಖಂಗೊಂಡ ಘಟನೆ ನಡೆದಿದೆ.

ಅಕಸ್ಮಿಕವಾಗಿ ತಡೆಗೋಡೆ ಕುಸಿದುಬಿದ್ದ ಕಾರಣ ಅಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.