ಮಂಗಳೂರು| ಮಾದಕ ವಸ್ತು ಸೇವನೆ – ಮೂವರ ಬಂಧನ
ಮಂಗಳೂರು: ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಮಧ್ಯಪ್ರದೇಶದ ಮಾಯಾರಾಮ್ (32), ಮಹಾರಾಷ್ಟ್ರದ ಪ್ರೇಮ್ ಸಿಂಗ್ ರಾಮ ಪವಾರ (48) ಮತ್ತು ಅನಿಲ್ ಪ್ರಕಾಶ್ ಕೋಲಿ (35) ಎಂದು ಗುರುತಿಸಲಾಗಿದೆ.
ದಿನಾಂಕ: 02-07-2025 ರಂದು ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 31/2025 ಕಲಂ. 8(c),20(b)(ii)(B) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ವರದಿಯಾಗಿರುತ್ತದೆ.
ಸದ್ರಿ ಪ್ರಕರಣದಲ್ಲಿ ಮಾದಕ ವಸ್ತು ಸೇವನೆ ಮಾಡುವವರಿಂದ ತನಿಖೆ ಆರಂಭಿಸಿ ಹಂತ ಹಂತವಾಗಿ ಮಾದಕ ವಸ್ತಗಳನ್ನು ಮಂಗಳೂರು ನಗರಕ್ಕೆ ಪೂರೈಕೆ ಮಾಡುವ 06 ಜನರನ್ನು ಪತ್ತೆ ಮಾಡಿ ಈಗಾಗಲೇ ದಸ್ತಗಿರಿ ಕ್ರಮ ಕೈಗೊಂಡು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು,ಮಾನ್ಯ ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿರುತ್ತದೆ.
ಪ್ರಕರಣ ತನಿಖೆಯ ವೇಳೆ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕ ವಸ್ತು ಸರಬರಾಜು ಆಗುತ್ತಿರುವ ಮಾಹಿತಿ ತಿಳಿದುಬಂದಿದ್ದು, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಕ್ಕೆ ವಿಶೇಷ ತಂಡವನ್ನು ಕಳುಹಿಸಿ 03 ಜನ ಆರೋಪಿತರನ್ನು ಪತ್ತೆ ಮಾಡಿ ದಸ್ತಗಿರಿ ಕ್ರಮ ಕೈಗೊಂಡು ಈ ದಿನ ದಿನಾಂಕ:09-07-2025 ರಂದು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿತರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿರುತ್ತದೆ. ಆರೋಪಿತರು ಕೃತ್ಯಕ್ಕೆ ಬಳಸಿದ 03 ಮೊಬೈಲ್ ಫೋನ್ ಗಳು ಹಾಗೂ ನಗದು ಹಣ ರೂ.1,78,920/- ರೂಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣದಲ್ಲಿ ತನಿಖೆ ಮುಂದುವರೆದಿದ್ದು ಇನ್ನುಳಿದ ಆರೋಪಿತರನ್ನು ಶೀಘ್ರದಲ್ಲಿ ಪತ್ತೆ ಹಚ್ಚಲಾಗುವುದು.
ಸದ್ರಿ ಪ್ರಕರಣದ ಆರೋಪಿತರ ಪತ್ತೆ ಕಾರ್ಯದಲ್ಲಿ ಸೆನ್ ಕ್ರೈಂ ಪೊಲೀಸ್ ಠಾಣಾ ಮತ್ತು ಮಂಗಳೂರು ನಗರದ ವಿಶೇಷ ತಂಡದ ಅಧಿಕಾರಿ ಮತ್ತು ಸಿಬ್ಬಂದಿರವರು ಭಾಗವಹಿಸಿರುತ್ತಾರೆ.