ಮಂಗಳೂರು | ಮೀನುಗಾರಿಕಾ ಬಂದರ್ ಬಳಿ ನದಿಯಲ್ಲಿ ಶವ ಪತ್ತೆ: ಕೊಲೆ ಶಂಕೆ

Spread the love

ಮಂಗಳೂರು | ಮೀನುಗಾರಿಕಾ ಬಂದರ್ ಬಳಿ ನದಿಯಲ್ಲಿ ಶವ ಪತ್ತೆ: ಕೊಲೆ ಶಂಕೆ

ಮಂಗಳೂರು: ಮಂಗಳೂರಿನ ಮೀನುಗಾರಿಕಾ ಬಂದರ್ ಸಮೀಪ ನದಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ಮೃತರನ್ನು ನಾಸೀರ್ ಯಾನೆ ದಕ್ಕೆ ನಾಸಿರ್ ಎಂದು ಗುರುತಿಸಲಾಗಿದ್ದು, ಈತನ ವಿರುದ್ಧ ಹಲವಾರು ಕಳ್ಳತನ ಹಾಗೂ ದರೋಡೆ ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ.

ಮೃತನ ಹಣೆ ಹಾಗೂ ದೇಹದ ಮೇಲೆ ಗಾಯಗಳ ಗುರುತುಗಳು ಪತ್ತೆಯಾಗಿದ್ದು, ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಮಾಡಿ ಮೃತದೇಹವನ್ನು ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ದಕ್ಕೆಯಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಪಕ್ಕದ ನದಿಯಲ್ಲಿ ಶವ ಪತ್ತೆಯಾಗಿದ್ದು, ಮಾಹಿತಿ ತಿಳಿದ ಕೂಡಲೇ ಪಾಂಡೇಶ್ವರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments