ಮಂಗಳೂರು: ಮೇ 16 ರಿಂದ 18 ರವರೆಗೆ ಮಾವು ಮೇಳ
ಮಂಗಳೂರು: ತೋಟಗಾರಿಕಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ವತಿಯಿಂದ ನಗರದ ಕದ್ರಿ ಉದ್ಯಾನವನದಲ್ಲಿ ಮೇ 16 ರಿಂದ 18 ರವರೆಗೆ ಮಾವು ಮೇಳ ಆಯೋಜಿಸಲಾಗಿದ್ದು, ಉದ್ಘಾಟನಾ ಸಮಾರಂಭ ಮೇ 16ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿದಿದ್ದಾರೆ.